ಸಹಕಾರಿ ಯೂನಿಯನ್‌ ಸದಸ್ಯ ಸಂಘಗಳಿಗೆ ಡಿವಿಡೆಂಡ್‌: ಶಶಿಕುಮಾರ್‌ ರೈ ಬಾಲ್ಯೊಟ್ಟು

KannadaprabhaNewsNetwork | Published : Mar 12, 2025 12:47 AM

ಸಾರಾಂಶ

ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವುದರಿಂದ ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗೆ ಹೊಸದಾಗಿ ಜಾರಿಯಾದ ಕಾಯಿದೆ ಕ್ರಮಗಳ ಬಗ್ಗೆ ಇಲಾಖೆಯ ಸುತ್ತೋಲೆಯ ಮಾಹಿತಿ ಅಗತ್ಯ ಎಂದರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕ ಎಸ್.ಎನ್‌. ಮನ್ಮಥ ಮಾತನಾಡಿ, ಸಂಘದ ಪ್ರಗತಿ ಹೊಂದಲು ಸಂಘದ ಅಂಕಿ ಅಂಶಗಳು, ನಿರ್ದೆಶಕರು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ತರಬೇತಿಗಳು ಅವಶ್ಯಕವಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಿ, ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಗತಿ ಪಥದಲ್ಲಿ ಮುನ್ನಡೆಯಲು ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ಸಹಕಾರ ಕಾಯಿದೆ, ನಿಯಮಗಳ ಬಗ್ಗೆ ಎನ್.ಪಿ.ಎ, ಎಸ್‌ಎಲ್‌ಆರ್‌ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕಾಗಿದೆ. ಜಿಲ್ಲಾ ಸಹಕಾರಿ ಯೂನಿಯನ್ ಜಿಲ್ಲೆಯ ಸಹಕಾರ ಸಂಘಗಳನ್ನು ಬಲಪಡಿಸುವ ಕಾರ್ಯವನ್ನು ಇಂತಹ ತರಬೇತಿಗಳ ಮುಖಾಂತರ ಮಾಡಲಾಗುವುದು. ಜಿಲ್ಲಾ ಸಹಕಾರಿ ಯೂನಿಯನ್‌ನ ಮುಂದಿನ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯತ್ವ ಪಡೆದ ಸಂಘಗಳಿಗೆ ಡಿವಿಡೆಂಟ್ ಕೊಡಲು ನಿರ್ಧರಿಸಲಾಗುವುದು ಎಂದರು. ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಮನ್ಮಥ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಸದಾನಂದ ಮತ್ತಿತರರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಅಧೀಕ್ಷಕ ಗೋಪಾಲ್ಸ ಬ್ಯಾಂಕಿನ ಮಾಜಿ ಎಂಡಿ ವಿಶ್ವನಾಥ ನಾಯರ್ ತರಬೇತಿ ನೀಡಿದರು.

ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ವಿ.ಹಿರೇಮಠ್‌ ಸ್ವಾಗತಿಸಿದರು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ವಂದಿಸಿದರು. ಚಂದ್ರಶೇಖರ ನಿರೂಪಿಸಿದರು.

Share this article