ಜನರನ್ನು ವಿಭಜಿಸುವುದು ಧರ್ಮದ ಕೆಲಸವಲ್ಲ: ಮುಹಮ್ಮದ್ ಕುಂಞಿ

KannadaprabhaNewsNetwork |  
Published : Sep 27, 2026, 02:45 AM IST
26ಇಸ್ಲಾಮಿ | Kannada Prabha

ಸಾರಾಂಶ

ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್ ಅಭಿಯಾನದ ಸಮಾರೋಪ ಸಮಾರಂಭದ ಅಂಗವಾಗಿ ‘ಮಾನವತೆಗೆ ಜೀವಂತ ಮಾದರಿ ಪ್ರವಾದಿ ಮುಹಮ್ಮದ್‌ (ಸ)’ ಎಂಬ ಶೀರ್ಷಿಕೆಯಡಿ ವಿಚಾರ ಸಂಕಿರಣವನ್ನು ಉಡುಪಿ ಡಾನ್‌ ಬಾಸ್ಕೋ ಚರ್ಚ್‌ ಹಾಲ್‌ನಲ್ಲಿ ಆಯೋಜಿಸಲಾಯಿತು.

ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೀರತ್ ಅಭಿಯಾನದ ಸಮಾರೋಪ ಸಮಾರಂಭದ ಅಂಗವಾಗಿ ‘ಮಾನವತೆಗೆ ಜೀವಂತ ಮಾದರಿ ಪ್ರವಾದಿ ಮುಹಮ್ಮದ್‌ (ಸ)’ ಎಂಬ ಶೀರ್ಷಿಕೆಯಡಿ ವಿಚಾರ ಸಂಕಿರಣವನ್ನು ಉಡುಪಿ ಡಾನ್‌ ಬಾಸ್ಕೋ ಚರ್ಚ್‌ ಹಾಲ್‌ನಲ್ಲಿ ಆಯೋಜಿಸಲಾಯಿತು.ಅಧ್ಯಕ್ಷತೆ ವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಜ. ಮುಹಮ್ಮದ್ ಕುಂಞಿ, ಎಲ್ಲ ಧರ್ಮಗಳೂ ಪ್ರೀತಿ, ಕರುಣೆ, ನ್ಯಾಯ, ಸತ್ಯ ಮತ್ತು ಮಾನವೀಯತೆಯಂತಹ ಮೌಲ್ಯಗಳಿಗೆ ಮಹತ್ವ ನೀಡುತ್ತವೆ. ಆದ್ದರಿಂದ ಧರ್ಮದ ಹೆಸರಿನಲ್ಲಿ ಅಂತರ ಸೃಷ್ಟಿಸುವ ಬದಲು, ಧರ್ಮಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಅರ್ಥಮಾಡಿಕೊಂಡು ಸಮಾಜದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಉಡುಪಿಯ ಶೋಕಮಾತಾ ಇಗರ್ಜಿಯ ಧರ್ಮಗುರು ರೆ. ಫಾ. ಡೆನಿಸ್ ಡೆಸಾ ಅವರು, ಇಂದು ಮಕ್ಕಳ ಮನಸ್ಸಿನಲ್ಲೇ ದ್ವೇಷ ತುಂಬುವಂತಹ ವಾತಾವರಣ ನಿರ್ಮಾಣವಾಗಿರುವುದು ಆತಂಕಕಾರಿ. ಮಕ್ಕಳು ಮುಂದೆ ದೊಡ್ಡವರಾದಾಗ ಸಮಾಜದ ಸ್ಥಿತಿ ಹೇಗಿರಬಹುದು ಎಂಬುದನ್ನು ನಾವು ಯೋಚಿಸಬೇಕಾಗಿದೆ ಎಂದು ಹೇಳಿದರು.

ಸಾಹಿತಿ, ರಂಗಕರ್ಮಿ ಹಾಗೂ ನಿರ್ದೇಶಕ ಯೋಗೇಶ್ ಮಾಸ್ಟರ್ ಮಾತನಾಡಿದರು.

ಶಿಕ್ಷಕಿ ಹೆಲೆನ್ ಶಾಲೆಟ್ ಲುವಿಸ್ ಮಾತನಾಡಿದರು. ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ನಗರ ಅಧ್ಯಕ್ಷ ನಿಸಾರ್ ಅಹಮದ್ ಪ್ರಸ್ತಾವಿಕ ನುಡಿಗಳನ್ನಾಡಿದರು. ಮೌಲಾನ ದಾನಿಷ್ ಕುರ್‌ಆನ್ ಪಠಣ ನೆರವೇರಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ಶಾನವಾಝ್ ಅತಿಥಿಗಳನ್ನು ಸ್ವಾಗತಿಸಿದರು. ಸೀರತ್ ಅಭಿಯಾನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಮುಶೀರ್ ಅಹಮದ್ ಶೇಖ್, ಕಾರ್ಯದರ್ಶಿ ಖಾಲಿದ್ ಅಬ್ದುಲ್ ಅಝೀಝ್ ಉಪಸ್ಥಿತರಿದ್ದರು. ಸರ್ಫರಾಜ್ ಮನ್ನಾ ಕಾರ್ಯಕ್ರಮ ನಿರೂಪಿಸಿದರು. ಫೈಝ್ ಅಹಮದ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಣೇಶ ವಿಗ್ರಹ ವಿಸರ್ಜನೆ ಸಂದರ್ಭ ನಾಲ್ಕು ಮಂದಿಗೆ ವಿದ್ಯುತ್ ಸ್ಪರ್ಶ : ಇಬ್ಬರು ಗಂಭೀರ
ಕಾರಿಡರ್‌ ಆವರಣಗೋಡೆ ಕುಸಿತ: ಓರ್ವ ಗಂಭೀರ, ಮೂವರಿಗೆ ಗಾಯ