ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕಿನ ಕಸಬಾ ಹೋಬಳಿ ಬಿಕ್ಕೇಗುಡ್ಡ ಗೇಟ್ ಸಮೀಪ ಪ್ರತಿಷ್ಠಾಪನೆಗೊಂಡಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ನೂತನ ಮಹಾದ್ವಾರ ಉದ್ಘಾಟನೆ ಹಾಗೂ ಬಿಲ್ವವೃಕ್ಷ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿ, ಗ್ರಾಮಗಳಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಜನರಲ್ಲಿ ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ಜಾಗೃತಿ ಮೂಡುವುದರ ಜತೆಗೆ ಪರಸ್ಪರ ಸಹಕಾರ ಮತ್ತು ಸಾಮರಸ್ಯದ ಮನೋಭಾವನೆ ಬೆಳೆಯುತ್ತದೆ ಎಂದು ಹೇಳಿದರು. ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಕೆ. ನರಸಿಂಹಮೂರ್ತಿ ಮಾತನಾಡಿ, ದೇವಾಲಯಗಳು ಗ್ರಾಮೀಣ ಜನರ ಬದುಕಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಧಾರ್ಮಿಕ ಆಚರಣೆಗಳು, ಹಬ್ಬಗಳು ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳ ಮೂಲಕ ಗ್ರಾಮಗಳಲ್ಲಿ ಭಕ್ತಿ, ಸಾಮರಸ್ಯ ಮತ್ತು ಒಗ್ಗಟ್ಟಿನ ವಾತಾವರಣ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಎಸ್.ಡಿ. ದಿಲೀಪ್ ಕುಮಾರ್ ಮಾತನಾಡಿ, ಏತ ನೀರಾವರಿ ಯೋಜನೆ ಮೂಲಕ ಈ ಭಾಗದ ಕೆರೆಗಳಿಗೆ ನೀರು ಹರಿಸಲು ಎಲ್ಲರೂ ಪಕ್ಷಾತೀತವಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕಿದೆ. ಈ ಭಾಗಕ್ಕೆ ನೀರಾವರಿ ಸೌಲಭ್ಯ ದೊರೆತರೆ ರೈತರು ಸಮೃದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಮಾಕನಹಳ್ಳಿ ಜಂಗಮ ಮಠದ ಅಧ್ಯಕ್ಷ ಗಂಗಾಧರ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ಅಧ್ಯಕ್ಷ ವಿಭವ ವಿದ್ಯಾಶಂಕರ ದೇಶಿಕೇಂದ್ರ ಸ್ವಾಮೀಜಿ, ತೋರೆಮಠದ ಅಧ್ಯಕ್ಷ ಆಟವಿ ಚನ್ನಬಸವ ಸ್ವಾಮೀಜಿ, ಗೋಡೆಕೆರೆ ಶ್ರೀಮದ್ ರಂಭಾಪುರಿ ಮಠದ ಅಧ್ಯಕ್ಷ ಮೃತ್ಯುಂಜಯ ದೇಶಿಕೇಂದ್ರ ಸ್ವಾಮೀಜಿ, ಜಿ.ಹೊಸಹಳ್ಳಿ ಸಂಸ್ಥಾನದ ಮುತ್ತಿನ ಮುಮ್ಮಡಿ ಏಳು ನಾಡಪ್ರಭು ಹುಚ್ಚೀರಪ್ಪಾಜಿ ಅರಸ್, ಪದವಿಪೂರ್ವ ಶ್ರೀ ಸಂಗಮೇಶ್ವರ ಓಂ ಶಕ್ತಿ ದೇವಸ್ಥಾನದ ಅರ್ಚಕ ಬಸವರಾಜು, ಹನುಮರಂಗಣ್ಣ, ಗುರುಬಸವಣ್ಣ, ರೈತ ಸಂಘದ ವೆಂಕಟೇಗೌಡ, ಗೋಪಾಲಪುರದ ಚಂದ್ರಶೇಖರ್, ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹುಚ್ಚೇಗೌಡ, ಕಾರ್ಯದರ್ಶಿ ಮಹದೇವಯ್ಯ, ಅರ್ಚಕರಾದ ನಟರಾಜು ಮತ್ತು ಬಸವರಾಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.