ಜೆಡಿಎಸ್ ಮದ್ದೂರು ತಾಲೂಕು ಅಧ್ಯಕ್ಷರಾಗಿ ದಿವ್ಯ ರಾಮಚಂದ್ರೆಟ್ಟಿ ಆಯ್ಕೆ

KannadaprabhaNewsNetwork |  
Published : Mar 28, 2024, 12:48 AM IST
27ಕೆಎಂಎನ್ ಡಿ21 | Kannada Prabha

ಸಾರಾಂಶ

ಜೆಡಿಎಸ್‌ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಡಿ.ರಮೇಶ್ ಆದೇಶ ಹೊರಡಿಸಿದ್ದು, ಮಾಜಿ ಸಚಿವ ಡಿ.ಸಿ.ತಮ್ಮಣ್ಣರ ಮಾರ್ಗದರ್ಶನದಂತೆ ನಾನು ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಪಕ್ಷಕ್ಕೆ ಯಾವುದೇ ಚ್ಯುತಿಬಾರದ ರೀತಿಯಲ್ಲಿ ನಡೆದುಕೊಳ್ಳುವುದಾಗಿ ದಿವ್ಯ ರಾಮಚಂದ್ರೆಟ್ಟಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಭಾರತೀನಗರಮದ್ದೂರು ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ಬನ್ನಹಳ್ಳಿ ದಿವ್ಯರಾಮಚಂದ್ರೆಟ್ಟಿ ಅವರನ್ನು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅಭಿನಂದಿಸಿದರು.

ನಂತರ ಮಾತನಾಡಿದ ದಿವ್ಯರಾಮಚಂದ್ರೆಟ್ಟಿ, ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಡಿ. ರಮೇಶ್ ಆದೇಶ ಹೊರಡಿಸಿದ್ದು, ಮಾಜಿ ಸಚಿವ ಡಿ.ಸಿ. ತಮ್ಮಣ್ಣರ ಮಾರ್ಗದರ್ಶನದಂತೆ ನಾನು ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಪಕ್ಷಕ್ಕೆ ಯಾವುದೇ ಚ್ಯುತಿಬಾರದ ರೀತಿಯಲ್ಲಿ ನಡೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ವೇಳೆ ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಕೂಳಗೆರೆ ಶೇಖರ್, ಸುಮುಖ ಟ್ರಸ್ಟ್ ಕುಮಾರ್, ಮಹೇಶ್, ತಾಪಂ ಮಾಜಿ ಅಧ್ಯಕ್ಷೆ ಚೌಡಮ್ಮ, ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ, ಮಾಜಿ ಉಪಾಧ್ಯಕ್ಷ ನಟರಾಜು, ಸದಸ್ಯೆ ಸವಿತ, ಸುಧೀರ್ ಸೇರಿದಂತೆ ಹಲವವರಿದ್ದರು.ಇಂದು ಮೈತ್ರಿ ಪಕ್ಷದ ಸಮನ್ವಯ ಸಭೆಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಮಾ.೨೮) ಗುರುವಾರ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಸಮನ್ವಯ ಸಮಿತಿ ಸಭೆ ಸುರಭಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸೇರಿದಂತೆ ಜಿಲ್ಲೆಯ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಉಭಯ ಪಕ್ಷಗಳ ವಿವಿಧ ಹಂತದ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಭಾಗವಹಿಸಲಿದ್ದಾರೆ. ಏ.೪ರಂದು ನಾಮಪತ್ರ ಸಲ್ಲಿಸಲಿರುವ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಗೆಲುವಿಗೆ ಅನುಸರಿಸಬೇಕಾದ ಕಾರ್ಯಕರ್ತರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲಾ ಮುಖಂಡರು, ಕಾರ್ಯಕರ್ತರು ಸಭೆಗೆ ಆಗಮಿಸಬೇಕು ಎಂದು ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಮನವಿ ಮಾಡಿದ್ದಾರೆ.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?