ಐದು ದಿನ ನಡೆಯುವ ಉತ್ಸವ । ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಪೂಜೆ । ವಿಶೇಷ ದಾಸೋಹ
ಕನ್ನಡಪ್ರಭ ವಾರ್ತೆ ಹನೂರುಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಜಾತ್ರೆ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ನೇತೃತ್ವದಲ್ಲಿ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನಡೆಯಿತು.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯುತ್ತಿರುವ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಜಲಾಭಿಷೇಕ, ಪಂಚಾಮೃತ ಅಭಿಷೇಕ, ಗಂಧದ ಅಭಿಷೇಕ, ಬಿಲ್ವಾರ್ಚನೆ ಸೇವೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿಯೊಂದಿಗೆ ಪೂಜೆ ಧಾರ್ಮಿಕವಾಗಿ ನಡೆಯಿತು.ನರಕ ಚತುರ್ಥಿ ಉತ್ಸವಗಳು:
ಹರಕೆ ಹೊತ್ತ ಮಾದಪ್ಪನ ಭಕ್ತರಿಂದ ಮಲೆ ಮಾದೇಶ್ವರನ ಬೆಟ್ಟದಲ್ಲಿ ನಡೆಯುವ ರುದ್ರಾಕ್ಷಿ ಮಂಟಪೋತ್ಸವ, ಬಸವನ ಉತ್ಸವ, ಹುಲಿ ವಾಹನ ಉತ್ಸವ ಹಾಗೂ ಬೆಳ್ಳಿಯ ತೇರು ಉತ್ಸವ ಮತ್ತು ಚಿನ್ನದ ತೇರಿನ ಉತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಮಾದಪ್ಪನ ಭಕ್ತರು ಮಾದಪ್ಪನ ದೇವಾಲಯದ ಆವರಣದಲ್ಲಿ ಚಪ್ಪರ ಮಳಿಗೆ ಉತ್ಸವ ಮಾದೇಶ್ವರ ಉತ್ಸವ ಮೂರ್ತಿಗೆ ಭಕ್ತರಿಂದ ಅಭಿಷೇಕ ಮಾಡುವ ಪಲ್ಲಕ್ಕಿ ಉತ್ಸವ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಸಂಭ್ರಮ ಸಡಗರದೊಂದಿಗೆ ನಡೆದವು.ವಿಶೇಷ ದಾಸೋಹ:
ಮಲೆ ಮಹದೇಶ್ವರನ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಹಬ್ಬದ ಐದು ದಿನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಭಾಗಗಳು, ವಿವಿಧ ಜಿಲ್ಲೆಗಳಿಂದ ಮತ್ತು ತಮಿಳುನಾಡಿನಿಂದ ಸಹ ಬರುವ ಮಾದಪ್ಪನ ಭಕ್ತರ ಅನುಕೂಲಕ್ಕಾಗಿ ದಾಸೋಹ ನಿರಂತರ ದಾಸೋಹವನ್ನು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ವ್ಯವಸ್ಥೆ ಕಲ್ಪಿಸಿದೆ. ಜತೆಗೆ ಪ್ರತ್ಯೇಕವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಗೆ ಬಂದಿರುವ ಪೊಲೀಸ್ ಇಲಾಖೆ ಮತ್ತು ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭಕ್ತರಿಗೂ ಸಹ ವಿಶೇಷ ದಾಸೋಹವನ್ನು ವ್ಯವಸ್ಥೆ ಮಾಡಲಾಗಿತ್ತು .ವಿಶೇಷ ಸೇವೆಗಳು:
ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತರಿಂದ ದಾಸೋಹ ಸೇವೆ ಮುಡಿಸೇವೆ, ಪಂಜಿನ ಸೇವೆ, ಉರುಳು ಸೇವೆ ಮತ್ತು ವಿಶೇಷ ಸೇವೆಗಳೊಂದಿಗೆ ಬೇಡಗಂಪಣ್ಣ ಸಮುದಾಯದ ಅರ್ಚಕರಿಂದ ಧಾರ್ಮಿಕವಾಗಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ಜರುಗಿದವು.ಹಾಲರುವೆ ಉತ್ಸವ:
ದೀಪಾವಳಿ ಜಾತ್ರೆ ವಿಶೇಷ ಅಂಗವಾಗಿ ನಡೆಯುವ ಐದು ದಿನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಅಮಾವಾಸ್ಯೆ ಪೂಜೆ ಉತ್ಸವ ಬೇಡಗಂಪಣ ಸಮುದಾಯದ ಹೆಣ್ಣುಮಕ್ಕಳು ಹಾಲು ಹಳ್ಳದಿಂದ ಜಲತಂದು ಮಾದೇಶ್ವರನಿಗೆ ಅಭಿಷೇಕ ಮಾಡುವ ಪೂಜಾ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಶನಿವಾರ ನಡೆಯಲಿದೆ.ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ದೀಪಾವಳಿ ಜಾತ್ರೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ನೀರಿನ ವ್ಯವಸ್ಥೆ ಮತ್ತು ವಿಶೇಷ ತಾಸು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಲಾಗಿದೆ.
ಎಇ. ರಘು, ಕಾರ್ಯದರ್ಶಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ.