ಹುಬ್ಬಳ್ಳಿ:
ಗಣೇಶೋತ್ಸವದ ಹಿನ್ನೆಲೆಯಲ್ಲಿ ಡಿಜೆ ಬಳಕೆಗೆ ಸಂಬಂಧಿಸಿದಂತೆ ಇಲ್ಲಿನ ನವನಗರದಲ್ಲಿರುವ ಹು-ಧಾ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಡಿಜೆ ಮಾಲೀಕರ ಸಭೆ ನಡೆಸಲಾಯಿತು. ಈ ವೇಳೆ ಹುಬ್ಬಳ್ಳಿ-ಧಾರವಾಡ ಸೌಂಡ್ ಸಿಸ್ಟಮ್ ಆ್ಯಂಡ್ ಲೈಟ್ ಅಸೋಷಿಯೇಷನ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತರು, ದೇಶದ ವಿವಿಧೆಡೆ ಡಿಜೆ ಸೌಂಡ್‌ನಿಂದ ಸಂಭವಿಸಿರುವ ಅನಾಹುತಗಳ ಕುರಿತು ಮಾಧ್ಯಮ ವರದಿಗಳ ಆಧಾರದಲ್ಲಿ ಮಾಹಿತಿ ನೀಡಿದರು. ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.ಸೌಂಡ್ ಸಿಸ್ಟಮ್ ಉದ್ಯಮವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದು, ಲಕ್ಷಾಂತರ ರುಪಾಯಿ ಖರ್ಚು ಮಾಡಿ ಉಪಕರಣಗಳನ್ನು ಖರೀದಿಸಲಾಗಿದೆ. ಹೋಳಿ ಹಾಗೂ ಗಣೇಶೋತ್ಸವದ ಸಂದರ್ಭದಲ್ಲಿ ಮಾತ್ರ ಸೌಂಡ್ ಸಿಸ್ಟಮ್‌ಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಪೊಲೀಸರ ಎಲ್ಲ ಸೂಚನೆಗಳನ್ನು ಪಾಲಿಸಿ, ನಿಯಮಾವಳಿ ಮೀರಿ ಡಿಜೆ ಬಳಸುವುದಿಲ್ಲ. ಆದರೆ, ರಾತ್ರಿ 10ರ ಬದಲಾಗಿ 12 ಗಂಟೆ ವರೆಗೆ ಡಿಜೆ ಬಳಕೆಗೆ ಅವಕಾಶ ನೀಡಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದರು.