ಜಪಾನ್‌ ಮಾದರಿ ತ್ಯಾಜ್ಯದಿಂದ ವಿದ್ಯುತ್‌ಗೆ ಡಿಕೆ ಚಿಂತನೆ

KannadaprabhaNewsNetwork |  
Published : Nov 25, 2026, 02:00 AM IST
CM | Kannada Prabha

ಸಾರಾಂಶ

ಬೆಂಗಳೂರು ನಗರ ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಹುಡುಕುವ ಉದ್ದೇಶದಿಂದ ತ್ಯಾಜ್ಯದಿಂದ ವಿದ್ಯುತ್‌ ಉತ್ಯಾದನೆ ಕುರಿತು ಹಾಗೂ ಕರ್ನಾಟಕದಲ್ಲೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣ ನಿರ್ಮಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಿಂತನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಜಪಾನ್‌:

ಬೆಂಗಳೂರು ನಗರ ತ್ಯಾಜ್ಯ ನಿರ್ವಹಣೆಗೆ ಶಾಶ್ವತ ಪರಿಹಾರ ಹುಡುಕುವ ಉದ್ದೇಶದಿಂದ ತ್ಯಾಜ್ಯದಿಂದ ವಿದ್ಯುತ್‌ ಉತ್ಯಾದನೆ ಕುರಿತು ಹಾಗೂ ಕರ್ನಾಟಕದಲ್ಲೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣ ನಿರ್ಮಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಿಂತನೆ ನಡೆಸಿದ್ದಾರೆ.

ಜಪಾನ್‌ ಪ್ರವಾಸದಲ್ಲಿರುವ ಸಿಎಂ ನೇತೃತ್ವದ ನಿಯೋಗ ಓಸಾಕಾದ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಯೋಜಿತ ನಗರ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ಪರಿಶೀಲಿಸಿತು.

ಮೈಶಿಮಾ ತ್ಯಾಜ್ಯ ದಹನ ಘಟಕದಲ್ಲಿ ದಿನಕ್ಕೆ 900 ಟನ್ ಪುರಸಭೆ ತ್ಯಾಜ್ಯವನ್ನು ವಿದ್ಯುತ್ ಆಗಿ ಪರಿವರ್ತಿಸುವ ಅತ್ಯಾಧುನಿಕ ತಂತ್ರಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿತು.

ಮೈಶಿಮಾ ದ್ವೀಪದಲ್ಲಿರುವ ಈ ಘಟಕ 2001ರಿಂದ ಕಾರ್ಯನಿರ್ವಹಿಸುತ್ತಿದೆ. ಇಂಥ ಎರಡು ದಹನಕಾರಿ ಘಟಕಗಳ ಮೂಲಕ ಪ್ರತಿದಿನ ಗರಿಷ್ಠ 900 ಟನ್ ಪುರಸಭೆ ಘನ ತ್ಯಾಜ್ಯವನ್ನು ಸಂಸ್ಕರಿಸಿ, 32 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಿಂದ ತ್ಯಾಜ್ಯವನ್ನು ವಿದ್ಯುತ್ತಾಗಿ ಪರಿವರ್ತಿಸಲಾಗುತ್ತದೆ. ಘಟಕವು ತನ್ನ ಸ್ವಂತ ಬಲದಿಂದಲೇ ವಿದ್ಯುತ್ ಅಗತ್ಯ ಪೂರೈಸಿಕೊಂಡು, ಉಳಿದ ವಿದ್ಯುತ್ತನ್ನು ವಿದ್ಯುತ್ ಜಾಲಕ್ಕೆ ಪೂರೈಸುತ್ತಿದೆ.

ಅತ್ಯಾಧುನಿಕ ರೈಲ್ವೆ ನಿಲ್ದಾಣಕ್ಕೆ ಒಲವು:

ಕರ್ನಾಟಕದಲ್ಲಿಯೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ನಿರ್ಮಿಸುವ ಪ್ರಯತ್ನ ಮಾಡಬೇಕು ಎಂಬ ಅಭಿಲಾಷೆ ಹೊಂದಿರುವುದಾಗಿ ಸಿಎಂ ಹೇಳಿದ್ದಾರೆ. ಜಪಾನ್‌ನಲ್ಲಿ ರೈಲ್ವೆ ಪ್ರಯಾಣದ ಅನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿರುವ ಅವರು, ಅಲ್ಲಿನ ರೈಲ್ವೆ ನಿಲ್ದಾಣಗಳ ಸ್ವಚ್ಛತೆ, ಆಧುನಿಕ ಸೌಲಭ್ಯಗಳು, ರೈಲುಗಳ ವೇಗ ಹಾಗೂ ಸಮಯಪಾಲನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.1,200 ಕೋಟಿ ರು. ಹೂಡಿಕೆ ಪ್ರಸ್ತಾವನೆ:

ಬಿಡದಿಯಲ್ಲಿರುವ ಸಂಸ್ಥೆಯ ಜಂಟಿ ಉದ್ಯಮವಾದ ''''ಟೊಯೊಟಾ ಕಿರ್ಲೋಸ್ಕರ್ ಮೋಟಾರ್''''ನಲ್ಲಿ ವಾರ್ಷಿಕ ಸುಮಾರು 3.31 ಲಕ್ಷ ವಾಹನಗಳ ಉತ್ಪಾದನಾ ಸಾಮರ್ಥ್ಯದ ಎರಡು ಘಟಕಗಳನ್ನು ಹೊಂದಿದ್ದು, ಕ್ವಿನ್ ಸಿಟಿಯಲ್ಲಿ ₹1,200 ಕೋಟಿ ವೆಚ್ಚದಲ್ಲಿ ''''ಟಿಕೆಎಂ ಬಿಜಿಂಟೆಲ್ ಹಬ್'''' ಸ್ಥಾಪನೆ ಬಗ್ಗೆ ಪ್ರಸ್ತಾಪ ಮಾಡಿತು. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಂಪನಿಯ ಮತ್ತಷ್ಟು ಹೂಡಿಕೆ ಹಾಗೂ ವಿಸ್ತರಣೆಗೆ ಕರ್ನಾಟಕ ಸರ್ಕಾರ ಪೂರ್ಣ ಬೆಂಬಲ ಮತ್ತು ಅಗತ್ಯ ಸೌಲಭ್ಯ ಒದಗಿಸಲಿದೆ ಎಂದು ಸಿಎಂ ನಿಯೋಗ ಭರವಸೆ ನೀಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಶ್ರಯ ಮನೆಗಳ ಹಂಚಿಕೆ ಕನಸು ನನಸಾಗಿದೆ: ಸಚಿವ ರುದ್ರಪ್ಪ ಲಮಾಣಿ
ಕಾಯಂ ಮುಖ್ಯ ಶಿಕ್ಷಕರ ನೇಮಕಕ್ಕೆ ಪಟ್ಟು; ಗ್ರಾಮಸ್ಥರಿಂದ ಶಾಲೆಗೆ ಬೀಗ