ಬೆಂಗಳೂರು : ಬೆಂಗಳೂರು ನಗರದ ರಸ್ತೆ ಗುಂಡಿ ಸಮಸ್ಯೆ, ಮೂಲ ಸೌಕರ್ಯ ಕೊರತೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ನಗರದ ಪ್ರಮುಖ ಉದ್ಯಮಿಗಳೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆ ನಡೆಸಿ, ನಗರದ ಸಮಸ್ಯೆಗಳ ಪರಿಹಾರಕ್ಕೆ ಕ್ರಿಯಾಯೋಜನೆ ರೂಪಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ.
ನಗರದ ಸಮಸ್ಯೆಗಳ ಕುರಿತು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹಾಗೂ ಉದ್ಯಮಿ ಮೋಹನ್ ದಾಸ್ ಪೈ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಇದು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಈ ಬೆನ್ನಲ್ಲೇ ಶನಿವಾರ ರಾತ್ರಿ ನಾಗರಿಕರೊಂದಿಗಿನ ಸಂವಾದ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳೊಂದಿಗೆ ಉದ್ಯಮಿಗಳ ಜತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ''''''''ನಾನು ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಅವರು ನಮ್ಮನ್ನು ಟೀಕಿಸುತ್ತಾರೆ ಎಂಬ ಕಾರಣಕ್ಕಾಗಿ ನಾವು ಅವರನ್ನು ಬಿಡಲು ಸಾಧ್ಯವಿಲ್ಲ. ಅವರೂ ಬೆಂಗಳೂರಿನ ಭಾಗ. ಅವರು ಕೆಲ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಅವರು ತೆರಿಗೆದಾರರು. ನಾವು ಅವರ ಮಾತು ಕೇಳಬೇಕು'''''''' ಎಂದು ಹೇಳಿದರು.
: ಇದೇ ವೇಳೆ ಸುರಂಗ ರಸ್ತೆ ಯೋಜನೆಗೆ ವಿರೋಧಿಸಿರುವ ತೇಜಸ್ವಿ ಸೂರ್ಯ ಬಗ್ಗೆ ಮಾತನಾಡಿ, ತೇಜಸ್ವಿ ಸೂರ್ಯ ಹೊರತುಪಡಿಸಿ ಬೇರೆ ಯಾರೂ ಸುರಂಗ ರಸ್ತೆ ವಿರೋಧಿಸುತ್ತಿಲ್ಲ. ಅವರು ನನ್ನೊಂದಿಗೆ ಸಭೆಗೆ ಸಮಯ ಕೋರಿದ್ದಾರೆ. ನಾನು ಅವರನ್ನು ಭೇಟಿ ಮಾಡಲು ಸಮಯ ನೀಡಿದ್ದೇನೆ. ಅವರು ಬಂದು ಚರ್ಚಿಸಲಿ. ಟೀಕಿಸುವುದು ಮುಖ್ಯವಲ್ಲ. ಆದರೆ, ಅದೇ ಸಮಯದಲ್ಲಿ ಅವರು ಪರಿಹಾರಗಳನ್ನು ಸಹ ಕಂಡುಕೊಳ್ಳಬೇಕು’ ಎಂದು ಹೇಳಿದರು.
ಸಭೆಯ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಮೋಹನ್ ದಾಸ್ ಪೈ, ‘ಜನರ ಜೊತೆ ಸಂವಾದ, ಕುಂದುಕೊರತೆ ಆಲಿಸುವುದು ಒಳ್ಳೆಯ ಕಾರ್ಯ. ಜನರ ಸಮಸ್ಯೆಗಳನ್ನು ಬಗೆಹರಿಸುವುದು ಉತ್ತಮ ನಾಯಕನ ಕೆಲಸ. ನಿಮ್ಮ ಈ ಕೆಲಸ ಜನ, ನಾಯಕರ ನಡುವಿನ ಸೇತುವೆ ಇದ್ದಂತೆ. ಕಳೆದ ಮೂರು ತಿಂಗಳಿಂದ ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಮಹತ್ವದ ಯೋಜನೆ ಕೈಗೊಂಡಿದ್ದೀರಿ. ಜಿಬಿಎ ರಚನೆ ಮಾಡಿದ್ದು ದೇಶದ ಅತೀ ದೊಡ್ಡ ಸುಧಾರಣೆ ಹಾಗೂ ನಗರಕ್ಕೆ ಅತ್ಯುತ್ತಮ ಕೊಡುಗೆ’ ಹಾಡಿ ಹೊಗಳಿದ್ದಾರೆ.
ಸಭೆಯಲ್ಲಿ ಚರ್ಚೆಯಾದ ಪ್ರಮುಖ ವಿಷಯಗಳು
- ಬೆಂಗಳೂರಿನ ಪ್ರಮುಖ ರಸ್ತೆಗಳ ಮೂಲಸೌಕರ್ಯ, ಔಟರ್ ರಿಂಗ್ ರಸ್ತೆ (ಓಆರ್‌ಆರ್), ಪೆರಿಫೆರಲ್ ರಿಂಗ್ ರಸ್ತೆ (ಪಿಆರ್‌ಆರ್) ಸುಸ್ಥಿತಿಯಲ್ಲಿಡುವುದು, ಒಳಚರಂಡಿ, ಸಂಚಾರ ದಟ್ಟಣೆ ಮತ್ತು ಕಸ ವಿಲೇವಾರಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಿಯಾ ಯೋಜನೆ ರೂಪಿಸುವುದು.- ಔಟರ್ ರಿಂಗ್ ರಸ್ತೆ ಅಭಿವೃದ್ಧಿ ಹಾಗೂ ಅನಿವಾರ್ಯತೆ.
- ಗುಂಡಿ ಮುಕ್ತ ರಸ್ತೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ- ಈಜಿಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದು.
- ಮೆಟ್ರೋ ಸೇವೆಯಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಆದ್ಯತೆ ಬಗ್ಗೆ ಚರ್ಚೆ