ಕನ್ನಡಪ್ರಭ ವಾರ್ತೆ ಶಿರಾ
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಹಗುರವಾಗಿ ಮಾತನಾಡಿರುವುದು ಖಂಡನೀಯ. ಡಿ.ಕೆ.ಸುರೇಶ್ ಅವರಿಗೆ ಅವರ ಅಣ್ಣನಾದ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂಬ ಚಪಲ ಇದೆ. ಎಚ್.ಡಿ.ಕುಮಾರಸ್ವಾಮಿ ಅವರು ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಅನೇಕ ಕೈಗಾರಿಕೆಗಳಿಗೆ ಮರು ಜೀವ ನೀಡಿದ್ದಾರೆ. ಅಂತಹ ನಾಯಕರ ಬಗ್ಗೆ ಮಾತನಾಡುವಾಗ ಮಾತಿನ ಮೇಲೆ ನಿಗಾ ಇರಬೇಕು. ಡಿ.ಕೆ.ಸುರೇಶ್ ಅವರು ಕೂಡಲೇ ಬಹಿರಂಗವಾಗಿ ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಮಾತನಾಡಿ, ಡಿ.ಕೆ.ಸುರೇಶ್ ಅವರು ತಾವು ಬೆಳೆದು ಬಂದಿರುವ ರೀತಿಗೆ ತಕ್ಕಂತೆ ಮಾತನಾಡುತ್ತಿದ್ದಾರೆ. ಬೇರೆಯವರ ಬಗ್ಗೆ ಮಾತನಾಡುವಾಗ ತಿಳಿದು ಮಾತನಾಡಬೇಕು. ರಾಜ್ಯದ ಪ್ರಭಲ ನಾಯಕರನ್ನು ನಿಂದಿಸುವುದನ್ನು ರಾಜ್ಯದ ಜನತೆ ಖಂಡಿಸುತ್ತಿದ್ದಾರೆ. ಎಚ್.ಡಿ.ದೇವೇಗೌಡ ಅವರ ಕುಟುಂಬ ಇಡೀ ರಾಜಕೀಯ ಜೀವನವನ್ನೇ ರೈತರ ಪರವಾಗಿ, ಜನಸಾಮಾನ್ಯರ ಪರವಾಗಿ ಮುಡುಪಾಗಿಟ್ಟಿದೆ. ಅವರ ಹೋರಾಟ ರೈತರ ಪರ. ಅಂತಹ ಕುಟುಂಬದ ಮಗನಾದ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅವರ ಬಗ್ಗೆ ಗೌರವವಾಗಿ ನಡೆದುಕೊಳ್ಳದಿದ್ದರೆ ಹೋರಾಟ ಮಾಡಲಾಗುವುದು ಎಂದರು.ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್.ಉಗ್ರೇಶ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿ.ಪಂ. ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ಮಾಜಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಟಿ.ಡಿ.ಮಲ್ಲೇಶ್, ಮಾಜಿ ನಗರಸಭಾ ಅಧ್ಯಕ್ಷ ಬಿ.ಅಂಜಿನಪ್ಪ, ಯುವ ಜೆಡಿಎಸ್ ಅಧ್ಯಕ್ಷ ಪುನೀತ್ ಗೌಡ, ನಗರಸಭಾ ಸದಸ್ಯ ಆರ್.ರಾಮು, ಮಾಜಿ ಸದಸ್ಯ ಆರ್.ರಾಘವೇಂದ್ರ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರೆಹಮತ್ ಉಲ್ಲಾ, ನಗರ ಜೆಡಿಎಸ್ ಅಧ್ಯಕ್ಷ ಶ್ರೀರಂಗ, ಸುನಿಲ್ ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.