ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಗೇಂದ್ರ ಬುಸ್ ಅನ್ನುವುದಿಲ್ಲ, ವಿಚಿತ್ರವಾದ ಮಾನಸಿಕತೆ ಇರುವ ನಾಗೇಂದ್ರ. ಇಂತಹವರ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಖಂಡನೀಯ. ಇಂಥಹ ಬೇಜವಾಬ್ದಾರಿ ಹೇಳಿಕೆಗಳು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವಂಥದ್ದಲ್ಲ ಎಂದು ಕುಟುಕಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರ ಪರವಾಗಿ ಮಾತನಾಡಿ ಯಾರ ಮೇಲೆ ಪ್ರಕರಣವಿಲ್ಲ? ನನ್ನ ಮೇಲೂ ಪ್ರಕರಣವಿದೆ. ಎಲ್ಲರ ಮೇಲೂ ಪ್ರಕರಣವಿದೆ ಎಂದಿರುವುದು ‘ಜೊತೆಗಿರುವವರು ಓಡಾಡಿಕೊಂಡಿರಲಿ’ ಎಂಬಂತಾಗಿದೆ. ಇಂಥಹ ಹೇಳಿಕೆಯನ್ನು ಮುಖ್ಯಮಂತ್ರಿಗಳಿಂದ ನಿರೀಕ್ಷಿಸಿರಲಿಲ್ಲ. ಡಿ.ಕೆ.ಶಿವಕುಮಾರ್ ಮೇಲಿರುವ ಪ್ರಕರಣದ ಸ್ವರೂಪವೇ ಬೇರೆ. ನಾಗೇಂದ್ರ ಮೇಲಿರುವ ಪ್ರಕರಣಗಳ ಸ್ವರೂಪವೇ ಬೇರೆ. ಇಂಥಹ ಬೇಜವಾಬ್ದಾರಿ ಹೇಳಿಕೆಗಳು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವಂಥದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಬಾರಿ ಅಧಿವೇಶನದ ಬಗ್ಗೆ ವಿಶೇಷವಾಗಿ ಯೋಚಿಸಲಾಗಿದೆ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ತಂಡದಿಂದ ಚರ್ಚೆ ನಡೆದಿದೆ. ವಿಧಾನಸಭೆ ಒಳಗೆ ಹಾಗೂ ಹೊರಗೆ ಹೋರಾಟ ರೂಪಿಸುವ ಚರ್ಚೆ ನಡೆದಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಲ್ಲದೆ ಪಿಂಚಣಿದಾರರು ತಮ್ಮ ಮರಣ ದಾಖಲೆಯ ದೃಢೀಕರಣ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಸರ್ಕಾರದ ಇತ್ತೀಚಿನ ಸುತ್ತೋಲೆ ಸರ್ಕಾರದ ಸಚಿವರು, ಅಧಿಕಾರಿಗಳು ಎಷ್ಟರ ಮಟ್ಟಿಗೆ ಮೂರ್ಖರಿದ್ದಾರೆ ಎಂಬುದನ್ನು ದೃಢೀಕರಿಸುತ್ತದೆ. ಇಂಥಹ ಅಸಂಬಂಧ ಸತ್ತೋಲೆಗಳನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಪಿಂಚಣಿ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು. ಅಂಗವಿಕಲರಂತಹ ಫಲಾನುಭವಿಗಳ ಅರ್ಹತೆಯನ್ನು ಪದೇ ಪದೇ ಪರಿಶೀಲಿಸುವ ಅಗತ್ಯವೇನು? ಸರ್ಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಹಿಂದೆ ನಡೆಸಿದ ಪರಿಶೀಲನೆ ಮತ್ತು ದಾಖಲಾತಿಗಳ ಮೇಲೆ ಸರ್ಕಾರಕ್ಕೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು.