ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಯಾರೂ ಸಹ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ಟಾರ್ಗೆಟ್ ಮಾಡುತ್ತೇವೆ ಎಂದರೆ ಅದು ಅವರ ಭ್ರಮೆ ಆಗಲಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದರು.
ಚಂದ್ರಶೇಖರ ಸ್ವಾಮೀಜಿಗಳು ವ್ಯಕ್ತಪಡಿಸಿರುವುದು ಅವರ ವೈಯಕ್ತಿಕ ಮತ್ತು ಸಮುದಾಯದ ಅಭಿಪ್ರಾಯ. ಎಲ್ಲವನ್ನು ಹೈಕಮಾಂಡ್ ತೀರ್ಮಾನ ಮಾಡಬೇಕು. ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಖಾಲಿ ಆದಾಗ ಚರ್ಚೆ ಮಾಡೋಣ. ಅವರವರ ಹೇಳಿಕೆಗಳು ಅವರವರ ವ್ಯಕ್ತಿತ್ವವನ್ನು ಪ್ರದರ್ಶಿಸುತ್ತವೆ. ಸಮಾಜ ಎಲ್ಲವನ್ನು ಗಮನಿಸುತ್ತಿದೆ. ಪಕ್ಷಕ್ಕೆ ಅಧಿಕಾರ ನೀಡಿರುವುದು ಒಳ್ಳೆಯ ಕೆಲಸ ಮಾಡಲಿ ಎಂದು ಹೇಳಿದರು.
ಅಧಿಕಾರ ಮತ್ತು ಹುದ್ದೆ ಯಾರಿಗೂ ಶಾಶ್ವತ ಅಲ್ಲ. ಒಳ್ಳೆಯದು ಬಿಟ್ಟು ಮಿಕ್ಕಿದ್ದೆಲ್ಲವೂ ಚರ್ಚೆ ಆಗುತ್ತಿದೆ. ಜನ ನಮಗೆ ಮ್ಯಾನ್‌ಡೇಟ್ ನೀಡಿರುವುದು ಒಳ್ಳೆಯ ಆಡಳಿತ ನೀಡಿ ಎಂದು ಅದಕ್ಕೆ ಯೋಗ್ಯತೆ ಇಲ್ಲ ಎಂದರೆ ಎಲ್ಲರೂ, ಎಲ್ಲವನ್ನು ಬಿಟ್ಟು ಚುನಾವಣೆಗೆ ಹೋಗುವುದು ಸೂಕ್ತ ಎಂದು ಡಿ.ಕೆ.ಸುರೇಶ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.ಬಾಕ್ಸ್................
ರಾಮನಗರ : ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಒಳ್ಳೆಯ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಅವಕಾಶವಿದ್ದು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮೂವರು ಡಿಸಿಎಂ ಸೃಷ್ಟಿಸುವ ಚರ್ಚೆಯನ್ನು ಕೆಲವರು ಮಾತ್ರ ಮಾತನಾಡುತ್ತಿದ್ದಾರೆ. ಆ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ. ನಾನು ಏನಿದ್ದರೂ ಕ್ಷೇತ್ರದ ಅಭಿವೃದ್ದಿ ಮಾಡುವುದೇ ನನ್ನ ಮೊದಲ ಆಧ್ಯತೆ ಎಂದು ಹೇಳಿದರು.
ಡಿ.ಕೆ.ಸುರೇಶ್‌ರದ್ದು ಪ್ರಮುಖ ಪಾತ್ರ
ಈ ವಿಷಯವಾಗಿ ಕೆಲವರು ಟ್ವೀಟ್ ಮುಖಾಂತರ ಕ್ರೆಡಿಟ್ ಪಡೆಯಲು ಹೊರಟಿದ್ದಾರೆ. ಈ ಯಶಸ್ವಿ ಯೋಜನೆ 2017ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 650 ಕೋಟಿ ವೆಚ್ಚದ ಯೋಜನೆಗೆ ಸಂಸದರಾಗಿದ್ದ ಡಿ.ಕೆ.ಸುರೇಶ್ ಅವರು ಡಿಪಿಆರ್ ಮಾಡಿಸಿದರು. ಇಷ್ಟೊಂದು ದೊಡ್ಡ ಮೊತ್ತದ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡದ ಪರಿಣಾಮ ಅದನ್ನು ಪರಿಷ್ಕರಣೆ ಮಾಡಿ 564 ಕೋಟಿ ರು. ಯೋಜನೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಕುಡಿಯುವ ನೀರಿನ ಯೋಜನೆಗೆ ಅಸ್ತು ನೀಡಿದರು. ಅದರ ಫಲವೇ ಇಂದು ರಾಮನಗರ ಪಟ್ಟಣಕ್ಕೆ ಕಾವೇರಿ ನೀರು ಬರಲು ಸಾಧ್ಯವಾಗಿದೆ ಎಂದರು.
ಈ ವೇಳೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್‌ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗುರುಪ್ರಸಾದ್, ಕಾಂಗ್ರೆಸ್ ಮುಖಂಡರಾದ ಬೈರೇಗೌಡ, ದಾಸೇಗೌಡ, ಷಡಕ್ಷರಿ, ರವಿ, ರಮೇಶ್ ಮತ್ತಿತರರಿದ್ದರು.
ಡಿ.ಕೆ.ಸುರೇಶ್.
28ಕೆಆರ್ ಎಂಎನ್ 8.ಜೆಪಿಜಿಶಾಸಕ ಇಕ್ಬಾಲ್ ಹುಸೇನ್.