ಡಿಕೆಶಿ ಬೆಳ್ತಂಗಡಿ ಪ್ರವಾಸ: ದಿನವಿಡೀ ಟೆಂಪಲ್‌ ರನ್‌

KannadaprabhaNewsNetwork |  
Published : Apr 21, 2025, 12:46 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಮೂಲಕ ಬೆಳ್ತಂಗಡಿ ಪ್ರವಾಸ ಆರಂಭಿಸಿದರು. ಭಾನುವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಟೆಂಪಲ್ ರನ್ ಪ್ರಾರಂಭಿಸಿದರು. ಈ ಸಂದರ್ಭ ಧರ್ಮಾಧಿಕಾರಿ ಡಾ.ಹೆಗ್ಗಡೆ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಮೂಲಕ ಬೆಳ್ತಂಗಡಿ ಪ್ರವಾಸ ಆರಂಭಿಸಿದರು.ಭಾನುವಾರ ಬೆಳಗ್ಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸುವ ಮೂಲಕ ಟೆಂಪಲ್ ರನ್ ಪ್ರಾರಂಭಿಸಿದರು. ಈ ಸಂದರ್ಭ ಧರ್ಮಾಧಿಕಾರಿ ಡಾ.ಹೆಗ್ಗಡೆ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.ಅಲ್ಲಿಂದ ಅವರು ವಾಣಿ ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅಲ್ಲಿ ಉಪಸ್ಥಿತರಿದ್ದ ಶೃಂಗೇರಿ ಕಿರಿಯ ಶ್ರೀಗಳ ಆಶೀರ್ವಾದ ಪಡೆದರಲ್ಲದೆ, ಅವರ ಆಶೀರ್ವಚನವನ್ನು ಸಂಪೂರ್ಣ ಆಲಿಸಿಯೇ ಅಲ್ಲಿಂದ ಗುರುವಾಯನಕೆರೆ ಶಕ್ತಿನಗರದಲ್ಲಿನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದರು.ಬಳಿಕ ಮಧ್ಯಾಹ್ನ ಸನಿಹದ ಎಕ್ಸೆಲ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ಸ್ಥಾಪಿಸಲ್ಪಟ್ಟ ವಿದ್ಯಾಗಣಪತಿಗೆ ಪೂಜೆ ಸಲ್ಲಿಸುವ ಮೂಲಕ ಮೂರ್ತಿಯ ದರ್ಶನಕ್ಕೆ ಚಾಲನೆ ನೀಡಿದರು.ಸಂಜೆ ಅವರು ನೇರವಾಗಿ ಮತ್ತೊಮ್ಮೆ ಧರ್ಮಸ್ಥಳಕ್ಕೆ ತೆರಳಿ ಕಲ್ಯಾಣಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿದರು. ಅಲ್ಲಿ ಹೆಗ್ಗಡೆ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ ಆಶೀರ್ವಾದ ಪಡೆದರು.ಧರ್ಮಸ್ಥಳದ ಸಭಾ ಕಾರ್ಯಕ್ರಮ ಮುಗಿಸಿದ ಬಳಿಕ ಉಪಮುಖ್ಯಮಂತ್ರಿ, ಸನಿಹದ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಶ್ರೀರಾಮ ಪರಿವಾರದ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿನ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಶ್ರೀಗಳು ಮೇ 18, 19ರಂದು ಅಯೋಧ್ಯೆಯಲ್ಲಿ ನಡೆಯುವ ಮಠದ ಶಾಖಾ ಕಟ್ಟಡದ ಶಿಲಾನ್ಯಾಸಕ್ಕೆ ಅವರನ್ನು ಆಹ್ವಾನಿಸಿದರು.ಕೊನೆಯಲ್ಲಿ ಅವರು ಲಾಯಿಲದಲ್ಲಿ ಶ್ರೀರಾಘವೇಂದ್ರ ಸ್ವಾಮಿ ವೃಂದಾವನಕ್ಕೆ ತೆರಳಿ ಪೂಜೆ ಸಲ್ಲಿಸಿ ಅಲ್ಲಿನ ಬ್ರಹ್ಮಕಲಶೋತ್ಸವಕ್ಕೆ ಶುಭಕೋರುವ ಮೂಲಕ ಬೆಳ್ತಂಗಡಿ ಪ್ರವಾಸವನ್ನು ಮುಕ್ತಾಯಗೊಳಿಸಿ ಮಂಗಳೂರಿಗೆ ತೆರಳಿದರು.

ಕಳೆದ ತಿಂಗಳು ಉಡುಪಿ ಜಿಲ್ಲೆಯ ಕಾಪು ಮಾರಿಯಮ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್‌, ಗಡಿನಾಡು ಕೇರಳದ ಕಾಸರಗೋಡಿನ ಇತಿಹಾಸ ಪ್ರಸಿದ್ದ ಮಧೂರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲೂ ಭಾಗಿಯಾಗಿದ್ದರು. ಎರಡು ತಿಂಗಳ ಅವಧಿಯಲ್ಲಿ ಮೂರು ಬಾರಿ ಕರಾವಳಿಗೆ ಆಗಮಿಸಿ ದೇವಸ್ಥಾನಗಳಿಗೆ ಭೇಟಿ ನೀಡಿ ಈ ಮೂಲಕ ಶಿವಕುಮಾರ್‌ ಗಮನ ಸೆಳೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!