1 ಕೋಟಿ ಸಹಿ ಎಐಸಿಸಿಗೆ ಡಿಕೆಶಿ ಹಸ್ತಾಂತರ

KannadaprabhaNewsNetwork |  
Published : Nov 11, 2025, 02:00 AM ISTUpdated : Nov 11, 2025, 06:00 AM IST
DK Shivakumar

ಸಾರಾಂಶ

ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.

  ನವದೆಹಲಿ :  ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.

ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ

ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗ, ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಖರ್ಗೆಯವರಿಗೆ ಸಲ್ಲಿಸಿತು. ನಂತರ, ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ, ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ ಸಹಿ ಸಹಿ ಸಂಗ್ರಹ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ, ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ। ಜಿ.ಸಿ.ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ