ಡಿಕೆಶಿ ಪ್ರಮಾಣವಚನ: ಶನಿವಾರಸಂತೆಯಲ್ಲಿ ಸಂಭ್ರಮ

KannadaprabhaNewsNetwork |  
Published : Jun 07, 2026, 02:45 AM IST
ಸಂಭ್ರಮಾಚರಣೆ | Kannada Prabha

ಸಾರಾಂಶ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸಂಭ್ರಮಾಚರಣೆ ನಡೆಯಿತು.ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿರುವುದು ರಾಜ್ಯದ ಜನತೆಗೆ ಸಂತಸದ ವಿಷಯವಾಗಿದ್ದು, ಅವರ ನೇತೃತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಂಘದ ಪದಾಧಿಕಾರಿಗಳು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ಹಂಚಿಕೊಂಡರು. ಕಾರ್ಯಕ್ರಮದ ವೇಳೆ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಪರ ಜಯ ಘೋಷಗಳನ್ನು ಮೊಳಗಿಸಲಾಯಿತು.ಸಂಘದ ಉಪಾಧ್ಯಕ್ಷ ಸಿ.ಜೆ. ಗಿರೀಶ್ ಮಾತನಾಡಿ, “ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತವನ್ನು ಡಿ.ಕೆ. ಶಿವಕುಮಾರ್ ನೀಡಲಿದ್ದು, ರೈತರು, ಕಾರ್ಮಿಕರು ಹಾಗೂ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ. ಅವರ ಆಡಳಿತದಲ್ಲಿ ರಾಜ್ಯವು ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯಲಿದೆ” ಎಂದು ಅಭಿಪ್ರಾಯಪಟ್ಟರು.ಅಲ್ಲದೆ, ಒಕ್ಕಲಿಗ ಸಮುದಾಯದ ಹೆಮ್ಮೆಯ ನಾಯಕರಾಗಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ಸಮುದಾಯಕ್ಕೆ ವಿಶೇಷ ಸಂತಸ ತಂದಿದ್ದು, ಅವರ ಆಡಳಿತಾವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರು ಆಶಯ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಟಿ.ಆರ್. ಕೇಶವಮೂರ್ತಿ, ಎಸ್.ಬಿ. ಬಸವರಾಜ್, ಎ.ಎಚ್. ಚಂದ್ರಕಾಂತ್, ಅಶೋಕ್, ಹರೀಶ್, ಹರಪಳ್ಳಿ ಆನಂದ, ಬಸವನಕೊಪ್ಪ ಸುರೇಶ್, ಸ್ವಾಗತ್ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಒಕ್ಕಲಿಗರ ಸಂಘದ ಸದಸ್ಯರು ಉಪಸ್ಥಿತರಿದ್ದರು.ಸಂಭ್ರಮಾಚರಣೆ ವೇಳೆ ಕಾರ್ಯಕರ್ತರು ಮತ್ತು ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿ, ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕಾಗಿ ಜಯಘೋಷಗಳನ್ನು ಕೂಗಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಪೈಪ್‌ಲೈನ್‌ ಸಂಪರ್ಕ ಮುಂದಿನ ವರ್ಷ ಪೂರ್ಣ
ಎನ್‌ಎಂಪಿಎಯಲ್ಲಿ ವಿಶ್ವ ಪರಿಸರ ದಿನಾಚರಣೆ