ಹುಬ್ಬಳ್ಳಿ:
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಕಾನೂನಿನಲ್ಲೇ ಇರುವ ಪ್ರಕ್ರಿಯೆ. ಅದು ಇನ್ನೂ ಪೂರ್ಣಗೊಂಡಿಲ್ಲ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ. ಹೀಗಿರುವಾಗ ಎಸ್‌ಐಆರ್ ವಿರುದ್ಧ ರಾಜಕೀಯ ಆರೋಪ ಮಾಡುವುದು ಹಾಗೂ ಅದನ್ನು ನೆಪ ಮಾಡಿಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದರು.
ಮುಖ್ಯಮಂತ್ರಿಯೇ ಚುನಾವಣಾ ಆಯೋಗದಂತಹ ಸಂವಿಧಾನಿಕ ಸಂಸ್ಥೆಯ ಕಚೇರಿ ಎದುರು ಧರಣಿ ನಡೆಸಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕರಾಳ ಬೆಳವಣಿಗೆ. ಸಂಪುಟ ಸಭೆಯನ್ನು ಮುಂದೂಡಿ, ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿರುವುದು ಸರ್ವಾಧಿಕಾರಿ ಧೋರಣೆಯ ಪ್ರತೀಕ ಎಂದು ಜೋಶಿ ಟೀಕಿಸಿದರು.ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಭಾಗವಹಿಸಿದ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಜೋಶಿ ಆಗ್ರಹಿಸಿದರು. ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಕೆಶಿ ನಡೆಸಿದ ಈ ಪ್ರಹಸನದಿಂದ ಜನರ ಗಮನವನ್ನು ಮೂಲ ಸಮಸ್ಯೆಗಳಿಂದ ಬೇರೆಡೆ ಸೆಳೆಯಲಾಗುತ್ತಿದೆ ಎಂದು ಆರೋಪಿಸಿದರು.
ಸೋಲಿಗೆ ಎಸ್‌ಐಆರ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಚುನಾವಣೆಯಲ್ಲಿ ಎದುರಾಗುವ ರಾಜಕೀಯ ಹಿನ್ನಡೆಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಹೊಣೆ ಮಾಡಲಾಗದು. ಎಸ್‌ಐಆರ್‌ನಲ್ಲಿ ಆಕ್ಷೇಪಣೆ ಅಥವಾ ಅಕ್ರಮ ಕಂಡುಬಂದರೆ ಚುನಾವಣಾ ಆಯೋಗದ ಮುಂದೆ ದಾಖಲೆಗಳೊಂದಿಗೆ ದೂರು ಸಲ್ಲಿಸಲು ಅವಕಾಶವಿದೆ ಎಂದರು.ಅಹಿಂದ ಹೆಸರಲ್ಲಿ ಕಾಂಗ್ರೆಸ್ ಲಾಭಕ್ಕೆ ಯತ್ನ:
ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮಾ. ನಾಗರಾಜ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಪ ಸದಸ್ಯ ಲಿಂಗರಾಜ ಪಾಟೀಲ, ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ಇದ್ದರು.