ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡದಿರಿ: ಶಾಸಕ ಡಾ. ಚಂದ್ರು ಕೆ. ಲಮಾಣಿ

KannadaprabhaNewsNetwork |  
Published : Jul 22, 2026, 02:30 AM IST
ಶಾಸಕ ಡಾ. ಚಂದ್ರು ಕೆ. ಲಮಾಣಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳೊಂದಿಗೆ ಪ್ರತಿದಿನ ಸಮಯ ಕಳೆಯುವುದು, ಅವರ ಸಮಸ್ಯೆಗಳನ್ನು ಆಲಿಸುವುದು, ಪ್ರೋತ್ಸಾಹದ ಮಾತುಗಳನ್ನು ಹೇಳುವುದು ಹಾಗೂ ಸಣ್ಣ ಸಾಧನೆಗಳನ್ನೂ ಮೆಚ್ಚುವುದು ಅವರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ.

ಶಿರಹಟ್ಟಿ: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಂದು ಮಗುವೂ ತನ್ನದೇ ಆದ ಪ್ರತಿಭೆ, ಆಸಕ್ತಿ ಮತ್ತು ಸಾಮರ್ಥ್ಯವನ್ನು ಹೊಂದಿರುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡುವ ಬದಲು, ಅವರ ವೈಯಕ್ತಿಕ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು. ತಾಲೂಕಿನ ಕಡಕೋಳ ಗ್ರಾಮದ ಬಸವರಾಜ ಕೊಂಚಿಗೇರಿ ಸರ್ಕಾರಿ ಪದವಿಪೂರ್ವ ಕಾಲೇಜನಲ್ಲಿ ಜರುಗಿದ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ಪೋಷಕರು ತಮ್ಮ ಮಕ್ಕಳನ್ನು ಅಂಕ, ಕ್ರೀಡೆ ಅಥವಾ ಇತರ ಚಟುವಟಿಕೆಗಳಲ್ಲಿ ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡುತ್ತಾರೆ. ಇಂತಹ ಹೋಲಿಕೆಗಳು ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗಿಸುವುದರ ಜತೆಗೆ ಮಾನಸಿಕ ಒತ್ತಡ, ನಿರಾಸೆ ಮತ್ತು ಕೀಳರಿಮೆ ಉಂಟುಮಾಡುವ ಸಾಧ್ಯತೆ ಇದೆ. ಬದಲಾಗಿ ಮಕ್ಕಳ ಸಾಧನೆಯನ್ನು ಮೆಚ್ಚಿ, ಅವರ ಆಸಕ್ತಿಗೆ ತಕ್ಕಂತೆ ಮಾರ್ಗದರ್ಶನ ನೀಡಿದರೆ ಅವರು ಉತ್ತಮ ಸಾಧನೆ ಮಾಡಲು ಪ್ರೇರಣೆ ಪಡೆಯುತ್ತಾರೆ ಎಂದರು.ಮಕ್ಕಳಿಗೆ ಓದಿನ ಜತೆಗೆ ಕಲೆ, ಸಂಗೀತ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿ ಇರಬಹುದು. ಪೋಷಕರು ಅವರ ಆಸಕ್ತಿಯನ್ನು ಗುರುತಿಸಿ ಅಗತ್ಯವಾದ ತರಬೇತಿ ಮತ್ತು ಅವಕಾಶಗಳನ್ನು ಕಲ್ಪಿಸಿದರೆ ಮಕ್ಕಳು ತಮ್ಮ ಪ್ರತಿಭೆಯನ್ನು ಅರಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳೊಂದಿಗೆ ಪ್ರತಿದಿನ ಸಮಯ ಕಳೆಯುವುದು, ಅವರ ಸಮಸ್ಯೆಗಳನ್ನು ಆಲಿಸುವುದು, ಪ್ರೋತ್ಸಾಹದ ಮಾತುಗಳನ್ನು ಹೇಳುವುದು ಹಾಗೂ ಸಣ್ಣ ಸಾಧನೆಗಳನ್ನೂ ಮೆಚ್ಚುವುದು ಅವರ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ ಮಾತನಾಡಿ, ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಉತ್ತಮ ಸಂಸ್ಕಾರ ಮತ್ತು ಮೌಲ್ಯಗಳನ್ನು ನೀಡುವುದು ಪೋಷಕರ ದೊಡ್ಡ ಜವಾಬ್ದಾರಿಯಾಗಿದೆ. ದೇಶಪ್ರೇಮ, ಶಿಸ್ತು, ಸಮಯ ಪಾಲನೆ ಮತ್ತು ಮಾನವೀಯ ಮೌಲ್ಯಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಪ್ಪಣ್ಣ ಕೊಂಚಿಗೇರಿ ಮಾತನಾಡಿ, ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡಿ, ಅವರ ಕನಸುಗಳು ಮತ್ತು ಗುರಿಗಳನ್ನು ಅರ್ಥ ಮಾಡಿಕೊಳ್ಳುವುದು ಪೋಷಕರ ಕರ್ತವ್ಯವಾಗಿದೆ. ಅವರು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಅಗತ್ಯ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಬೆಂಬಲ ನೀಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಾನು ಲಮಾಣಿ, ಶರಣಪ್ಪ ಹರ್ಲಾಪೂರ, ಗಂಗಾಧರ ಮೆಣಸಿನಕಾಯಿ, ಬಸವರಾಜ ಪೂಜಾರ, ಕಾಲೇಜ ಪ್ರಾಚಾರ್ಯ ಮಲ್ಲಪ್ಪ ಹರ್ತಿ, ಶರಣಪ್ಪ ಕಲಗುಡಿ, ಜ್ಯೋತಿ ಕೊಂಚಿಗೇರಿ, ಕನಕಮ್ಮ, ಮುಲ್ಕಿಗೌಡ್ರ, ತಮ್ಮನಗೌಡ್ರ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾಣಿಗಳಿಂದಲೇ ಸಾಂಕ್ರಾಮಿಕ ರೋಗ
ಧರ್ಮವೇ ಸಮಸ್ತ ದುಃಖದ ಶಮನೌಷಧ: ಅಭಿನವ ಪಂಚಾಕ್ಷರ ಶಿವಾಚಾರ್ಯ ಶ್ರೀ