ಕೊಪ್ಪಳ: ತಾಲೂಕಿನಾದ್ಯಂತ ನಡೆಯುತ್ತಿರುವ ಕಾಮಗಾರಿಗಳ ಮೇಲೆ ನಿಗಾ ಇಡುವ ಜತೆಗೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ಕೊಪ್ಪಳ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ತಾಕೀತು ಮಾಡಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ವಿವಿಧ ವಿಷಯ ಪರಿಣತರಿಂದ ವಿಶೇಷ ತರಗತಿ ಜರುಗಿಸಲು ಪ್ರತಿ ಶಿಕ್ಷಕರಿಗೆ ಇಬ್ಬರು ವಿದ್ಯಾರ್ಥಿಗಳ ಜವಾಬ್ದಾರಿ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ ಮಾಹಿತಿ ನೀಡಿದರು.
ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಹನಿ ನೀರಾವರಿ ಸೌಲಭ್ಯ ಇಲಾಖೆಯಿಂದ ಒದಗಿಸತಕ್ಕದ್ದು. ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ಮೊಟ್ಟೆ ವಿತರಣೆಗೆ ಟೆಂಡರ್ ಆಗಿದೆ. 8 ಕೇಂದ್ರಗಳಿಗೆ ಅಂಗನವಾಡಿ ಕಟ್ಟಡ ಸಮಸ್ಯೆ ಇದ್ದು, ಕಾಮಗಾರಿ ಪ್ರಾರಂಭಿಸಿಲ್ಲ ಎಂಬ ಮಾಹಿತಿ ಸಿಡಿಪಿಒ ಜಯಶ್ರೀ ಆರ್ ನೀಡಿದರು.ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ ಕಾಲನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಇಲಾಖೆಯಿಂದ ಅನುದಾನ ಒದಗಿಸಿದಲ್ಲಿ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಜೆಜೆಎಂ ಸಂಬಂಧಿಸಿದಂತೆ ಮುಕ್ತಾಯ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.