ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ರೈತರು, ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲು ಮಾಡುವಾಗ ಮೈಕ್ರೋ ಫೈನಾನ್ಸ್ ಕಂಪನಿಗಳು ಮೇಲೆ ಕಿರುಕುಳ ಹಾಗೂ ಒತ್ತಡ ಹೇರುತ್ತಿರುವುದು ಕಂಡುಬಂದಿದೆ. ಇದು ಅತಿರೇಕವಾದಲ್ಲಿ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಿರುಕುಳ ನೀಡಿದ ಮೈಕ್ರೋಪೈನಾನ್ಸ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
೨ ರಿಂದ ೩ ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ:ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ ಎಂದರು.
ಸಾಲ ಮರು ಪಾವತಿಗೆ ಸಂಬಂಧಿಸಿದಂತೆ ಮೈಕ್ರೋಪೈನಾನ್ಸ್‌ಗಳು ತೊಂದರೆ ನೀಡುತ್ತಿದ್ದಲ್ಲಿ ಸಹಾಯವಾಣಿ ಸಂಖ್ಯೆ: ೧೮೦೦೪೨೫೫೬೫೪, ೧೮೦೦೧೦೨೧೦೮೦, ೦೧೧ ೪೭೧೭೪೪೧೦ ಅನ್ನು ಸಂಪರ್ಕಿಸಬಹುದು ಎಂದರು.