
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಪಂ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಅರ್ಹರಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಬೇಕು ಎಂಬುದು ಉದ್ದೇಶವಾಗಿದೆ. ಆದ್ದರಿಂದ ಮಾಹಿತಿ ಕೇಳುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಭಾವಚಿತ್ರ ಮತ್ತಿತರ ಮಾಹಿತಿ ಒದಗಿಸುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಕೋರಿದರು.ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವ ಫಲಾನುಭವಿಗಳು ಜೀವಂತ ಪ್ರಮಾಣ ಪತ್ರ ನೀಡಬೇಕೆಂದು ಸೈಬರ್ ಕೇಂದ್ರಗಳಿಗೆ ಓಡಾಡುತ್ತಿದ್ದು, ಇಂತಹ ಮಾಹಿತಿಗೆ ಕಿವಿಗೊಡಬಾರದು, ಯಾರೂ ಸಹ ಗಾಬರಿಗೆ ಒಳಗಾಗುವುದು ಬೇಡ ಎಂದು ಧರ್ಮಜ ಉತ್ತಪ್ಪ ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೆ ಹಣ ಬಿಡುಗಡೆಯಾಗಿದ್ದು. ಸದ್ಯ 1,17,905 ಫಲಾನುಭವಿಗಳಿಗೆ ಹಣ ಪಾವತಿಯಾಗಲಿದೆ. ಇದುವರೆಗೆ ಶೇ. 98ರಷ್ಟು ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ ಎಂದರು.
ಈ ಸಂದರ್ಭ ಮಾತನಾಡಿದ ಸಮಿತಿ ಸದಸ್ಯ ಕಾಳಿಮಾಡ ಪ್ರಶಾಂತ್ ಅವರು ಮನೆ ಮನೆಗೆ ಆಹಾರ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ಮಾಡಬೇಕಿದೆ. ಆದರೆ ತಹಸೀಲ್ದಾರರೇ ಸ್ಥಳ ಪರಿಶೀಲಿಸಬೇಕು ಎಂದು ವರದಿ ನೀಡುತ್ತಿದ್ದಾರೆ. ಇದು ಸರಿಯಲ್ಲ. ಕೆಲವು ಕುಟುಂಬಗಳಲ್ಲಿ ಬಿಪಿಎಲ್ ಪಡಿತರ ಚೀಟಿಗಳು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಗೊಂಡಿದ್ದು, ಇದನ್ನು ಸರಿಪಡಿಸುವಂತಾಗಬೇಕು ಎಂದು ಕೋರಿದರು.