ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಮಡುವಿನಕೋಡಿ ಗ್ರಾಮದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟಿಸಿ ಮಾತನಾಡಿ, ಜೆಡಿಎಸ್ ಅಧಿಕಾರ ನಡೆಸಿದ ಅವಧಿಯಲ್ಲಿ ರಾಜ್ಯದ ಪ್ರತಿ ತಾಲೂಕುಗಳಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹತ್ತಾರು ಸಬ್ ಸ್ಟೇಷನ್‌ಗಳನ್ನು ನಿರ್ಮಾಣ ಮಾಡಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಶ್ರಮಿಸಲಾಗಿತ್ತು ಎಂದರು.
ಕೆ.ಆರ್.ಪೇಟೆ ತಾಲೂಕಿನ ಹಲವಾರು ಭಾಗಗಳಲ್ಲಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣ ಮಾಡಲಾಗಿದೆ. ವಿದ್ಯುತ್ ಸಮರ್ಪಕವಾಗಿ ರೈತರಿಗೆ, ಗ್ರಾಮಗಳಿಗೆ ಪೂರೈಕೆಯಾಗುತ್ತಿದೆ. ಇದರಿಂದ ವಿದ್ಯುತ್ ಸಮಸ್ಯೆ ಕಡಿಮೆಯಾಗಿದೆ ಎಂದರು.ಜನಸಾಮಾನ್ಯರಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರು ಸರಿಯಾಗಿ ಮಾಡಿಕೊಟ್ಟರೆ ಉಳಿದ ಯಾವುದೇ ಸಮಸ್ಯೆಯನ್ನು ಹಂತ ಹಂತವಾಗಿ ಬಗೆಹರಿಸಿಕೊಡಬಹುದು. ಆದರೆ, ಈಗಿನ ಸರ್ಕಾರ ರೈತರಿಗೆ ಕಿರುಕುಳ ನೀಡುತ್ತಿದೆ. ಸರ್ಕಾರವು ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಇದನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಚೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ, ಜೆಇ ಫಾಝಿಲ್, ಗ್ರಾಪಂ ಅಧ್ಯಕ್ಷೆ ಪ್ರೀತಿ ಭೈರನಾಯಕ್, ಉಪಾಧ್ಯಕ್ಷ ನಾಗರಾಜು, ಪಿಡಿಒ ಮಹೇಶ್, ತಾಲೂಕು ಜೆಡಿಎಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ರತಿಮಹಾದೇವ್, ಗ್ರಾ.ಪಂ.ಸದಸ್ಯರಾದ ರವಿ, ಚಂದ್ರಹಾಸ, ಮುಖಂಡರಾದ ಸಂದೇಶ್, ವಿಜಯ್‌ಕುಮಾರ್ ಸೇರಿದಂತೆ ಹಲವರಿದ್ದರು.