ಗ್ರಾಮದಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಿಗದಿತ ಕಸದ ಬುಟ್ಟಿಯಲ್ಲಿ ಹಾಕಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರು ಆಗಾಗ್ಗೆ ಬಿಪಿ ಮತ್ತು ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ.
ಕುರುಗೋಡು:
ಸಮೀಪದ ಕೊಂಚಿಗೇರಿ ಗ್ರಾಮದ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಗೆ ಹಾಗೂ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಸಮುದಾಯದ ಆರೋಗ್ಯ ಅಧಿಕಾರಿ ಯು. ನಾಗೇಶ್ ಮಾತನಾಡಿ, ಗ್ರಾಮದಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಿಗದಿತ ಕಸದ ಬುಟ್ಟಿಯಲ್ಲಿ ಹಾಕಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರು ಆಗಾಗ್ಗೆ ಬಿಪಿ ಮತ್ತು ಶುಗರ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದರು.
ಮುಖ್ಯ ಶಿಕ್ಷಕ ಎಚ್. ದುರುಗಪ್ಪ ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳ ಸದುಪಯೋಗ ಪಡಿಸಿಕೊಳ್ಳಿ ಎಂದರು.
ನಂತರದಲ್ಲಿ 10 ಜನ ಶಿಕ್ಷಕರು ಮರಣೋತ್ತರ ಅಂಗಾಂಗ ದಾನ ಮಾಡಲು ನೋಂದಣಿ ಮಾಡಿಸಿದರು. 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಯು. ನಾಗೇಶ್, ಮುಖ್ಯ ಶಿಕ್ಷಕ ದುರುಗಪ್ಪ, ಆರೋಗ್ಯ ನಿರೀಕ್ಷಣಾ ಅಧಿಕಾರಿ ಷಡಕ್ಷರಯ್ಯ ಸ್ವಾಮಿ, ಆರೋಗ್ಯ ಸುರಕ್ಷಾ ಅಧಿಕಾರಿ ಗಂಗಮ್ಮ, ಚಿದಾನಂದ, ಆಶಾ ಕಾರ್ಯಕರ್ತೆಯರು ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.