ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ: ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Aug 14, 2024, 12:58 AM IST
ಚಲುವರಾಯಸ್ವಾಮಿ | Kannada Prabha

ಸಾರಾಂಶ

ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ ಹಾಗೆ ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ. ಕೆಆರ್‌ಎಸ್ ಅಣೆಕಟ್ಟುಸುಭದ್ರವಾಗಿದೆ, ಆತಂಕಪಡುವ ಅವಶ್ಯಕತೆ ಇಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ತುಂಗಭದ್ರಾ ಜಲಾಶಯದ ಅಣೆಕಟ್ಟೆಯ ಕ್ರಸ್ಟ್‌ಗೇಟ್ ತುಂಡಾದ ಪ್ರಕರಣದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ ಹಾಗೆ ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ. ಕೆಆರ್‌ಎಸ್ ಅಣೆಕಟ್ಟುಸುಭದ್ರವಾಗಿದೆ, ಆತಂಕಪಡುವ ಅವಶ್ಯಕತೆ ಇಲ್ಲ. ಮೊನ್ನೆಯಷ್ಟೇ ರಿಪೋರ್ಟ್ ಬಂದಿದೆ. ೯೨ ವರ್ಷ ಹಳೆಯದಾಗಿರುವ ಅಣೆಕಟ್ಟೆಯಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕೆಆರ್‌ಎಸ್ ಜಲಾಶಯದಲ್ಲಿ ಭದ್ರತಾ ಲೋಪ

ಕನ್ನಡಪ್ರಭ ವಾರ್ತೆ ಮಂಡ್ಯಕೆಆರ್‌ಎಸ್ ಅಣೆಕಟ್ಟು ಮೇಲ್ಭಾಗದಲ್ಲಿ ನಿಯಮ ಉಲ್ಲಂಘಿಸಿ ಕೈಗಾರಿಕಾ ಭದ್ರತಾ ಪಡೆಯವರು ಪ್ರವಾಸಿಗರಿಗೆ ಅವಕಾಶ ಮಾಡಿಕೊಟ್ಟು ಭದ್ರತಾ ಲೋಪವೆಸಗಿರುವುದು ಕಂಡುಬಂದಿದೆ. ಏಕಕಾಲಕ್ಕೆ ೩೦ರಿಂದ ೪೦ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿ ಭದ್ರತಾ ಪಡೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ. ಅಣೆಕಟ್ಟೆಯ ಮೇಲ್ಭಾಗದಲ್ಲಿ ಪ್ರವಾಸಿಗರು ಅಡ್ಡಾದಿಡ್ಡಿ ಓಡಾಡುತ್ತಾ ಅಣೆಕಟ್ಟೆ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಾ, ರೀಲ್ಸ್ ಮಾಡುತ್ತಾ ಮೋಜು ಮಸ್ತಿ ನಡೆಸಿದ್ದಾರೆ. ಪತ್ರಿಕಾ ಮಾಧ್ಯಮಗಳಿಗೆ ಮಾತ್ರ ನಿರ್ಬಂಧ ಹೇರುವ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳು ಈಗ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಪ್ರಭಾವಿಗಳು, ಖಾಸಗಿ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಿ ಕರ್ತವ್ಯ ಲೋಪವೆಸಗಿದ್ದಾರೆ. ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳ ನಡೆಗೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 123.05 ಅಡಿ

ಒಳ ಹರಿವು – 15,445 ಕ್ಯುಸೆಕ್

ಹೊರ ಹರಿವು – 14,518 ಕ್ಯುಸೆಕ್

ನೀರಿನ ಸಂಗ್ರಹ – 47.037 ಟಿಎಂಸಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ