ಕನ್ನಡಪ್ರಭ ವಾರ್ತೆ ಕೋಲಾರಬಾಲಕಾರ್ಮಿಕತೆ ಪೂರ್ಣ ನಿರ್ಮೂಲನೆ ದೃಷ್ಟಿಯಿಂದ ಜನವರಿ ತಿಗಳಿಂದ ಮಾರ್ಚ್ ಅಂತ್ಯದವರೆಗೂ ಬಾಲಕಾರ್ಮಿಕರ, ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ೧೪ ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಂಡರೆ ಕಠಿಣ ಶಿಕ್ಷೆ ಖಚಿತ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ಎಚ್ಚರಿಸಿದರು.ಬಂಗಾರಪೇಟೆಯ ಇಂಡಿಯನ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಜನವರಿಂದ ಮಾರ್ಚ್ ಅಂತ್ಯದವರೆಗೂ ನಡೆಯುವ ಬಾಲಕಾರ್ಮಿಕರ,ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಬಾಲಕಾರ್ಮಿಕ ಪದ್ಧತಿ ನಿಷೇಧ
ಪೋಷಕರಿಗೆ ಹೊರೆಯಾಗದಿರಿ
ಜೀವನ ಅಮೂಲ್ಯವಾಗಿದ್ದು, ಬದುಕಿದ್ದಷ್ಟು ದಿನ ಸಮಾಜಕ್ಕೆ ಏನಾದನ್ನದರೂ ಮಾಡೋಣ ಆದರೆ ಸಮಾಜ ಘಾತಕರಾಗಿ ಸಮಾಜ ಮತ್ತು ಪೋಷಕರಿಗೆ ಹೊರೆಯಾಗಬಾರದು ಎಂದು ತಿಳಿಸಿ, ಬಿಟ್ಟು ದುಶ್ಚಟಗಳಿಗೆ ದಾಸರಾಗಿ ಇಡೀ ನಿಮ್ಮ ಜೀವನ ನಾಶಮಾಡಿಕೊಳ್ಳಲು ನೀವೇ ಕಾರಣರಾಗದಿರಿ ಎಂದು ಎಚ್ಚರಿಸಿದರು.ಇದೇ ಸಂದರ್ಭದಲ್ಲಿ ಬಾಲ್ಯಕಾರ್ಮಿಕ ತಡೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇಂಡಿಯನ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಅಬ್ದುಲ್ ಸಲೀಂ, ಸಹಾಯಕ ಜನರಲ್ ಮ್ಯಾನೇಜರ್ ರಾಜೇಶ್, ಕಾರ್ಮಿಕ ಅಧಿಕಾರಿ ವರಲಕ್ಷ್ಮಿ, ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ ಇದ್ದರು.