ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಬಳಸಬೇಡಿ

KannadaprabhaNewsNetwork | Published : Dec 2, 2024 1:16 AM

ಸಾರಾಂಶ

ತಂಬಾಕು ನಿಯಂತ್ರಣ ಅಧಿನಿಯಮ ಕಾಯಿದೆಯಡಿ ಯಾರೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಮಾರುಕಟ್ಟೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟ್ ಸೇದುವಂತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಲ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- ಸಾಸ್ವೇಹಳ್ಳಿಯಲ್ಲಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಸತೀಶ್‌ ಸೂಚನೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ತಂಬಾಕು ನಿಯಂತ್ರಣ ಅಧಿನಿಯಮ ಕಾಯಿದೆಯಡಿ ಯಾರೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಮಾರುಕಟ್ಟೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟ್ ಸೇದುವಂತಿಲ್ಲ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಲ್ ಹೇಳಿದರು.

ತಾಲೂಕಿನ ಸಾಸ್ವೇಹಳ್ಳಿ ಹೋಬಳಿ ಕೇಂದ್ರದ ಸಾರ್ವಜನಿಕ ಸ್ಥಳಗಳಲ್ಲಿರುವ ಅಂಗಡಿ ಮತ್ತು ಹೋಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ, ಮಾಲೀಕರಿಗೆ ಮತ್ತು ಮಾರಾಟಗಾರರಿಗೆ ತಂಬಾಕು ಉತ್ಪನ್ನಗಳಿಂದ ಆಗುವ ಹಾನಿ ಮತ್ತು ಮಾರಾಟ ವಿಧಾನದ ಬಗ್ಗೆ ಜಾಗೃತಿ ಮೂಡಿಸಿದರು. ತಂಬಾಕು ಉತ್ಪನ್ನ ಅಧಿನಿಯಮದಡಿ ಮಾತ್ರವೇ ಮಾರಾಟ ಮಾಡುವಂತೆ ಸೂಚನೆಗಳನ್ನು ನೀಡಿ ಜಾಗೃತಿ ಮೂಡಿಸಿದರು.

ಶಾಲಾ- ಕಾಲೇಜು ಆವರಣದಲ್ಲಿ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಇರುವ ತಂಬಾಕು ಉತ್ಪನ್ನಗಳ ಮೇಲೆ ಬಳಕೆಯಿಂದ ಆಗುವ ಹಾನಿ ಸೂಚಿಸುವ ಚಿತ್ರ ಮತ್ತು ಮಾಹಿತಿ ಮುದ್ರಣವಾಗಿದ್ದರೆ ಅಂತಹ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಇರುವುದಾಗಿ ಹೇಳಿದರು.

ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿ, ಹೋಟೆಲ್ ಮಾಲೀಕರಿಗೆ ದಂಡ ಸಹ ವಿಧಿಸಲಾಯಿತು. ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೆಲ್ತ್ ಇನ್‌ಸ್ಪೆಕ್ಟರ್ ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಂಗಾಪುರ, ಸಾಸ್ವೆಹಳ್ಳಿ ಕ್ಲಸ್ಟರ್‌ಗಳ ಸಿ.ಆರ್.ಪಿ.ಗಳಾದ ಎಚ್.ರಾಜು, ಎಚ್.ಬಿ. ಕಾಳಾಚಾರ್, ಸಾಸ್ವೆಹಳ್ಳಿ ಉಪ ಪೊಲೀಸ್ ಠಾಣೆಯ ಪೇದೆ ಪ್ರಶಾಂತ್, ಸಮಾಜ ಸೇವಕಿ ಶಾಮನೂರು ಶೈಲಾ ತಂಡದಲ್ಲಿದ್ದರು.

- - - -1ಎಚ್.ಎಲ್.ಐ2:

ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಹೋಬಳಿ ಕೇಂದ್ರದಲ್ಲಿ ದಾವಣಗೆರೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಅಂಗಡಿ, ಹೋಟೇಲ್‌ಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ ದಂಡ ವಿಧಿಸಿ, ಜನಜಾಗೃತಿ ಮೂಡಿಸಲಾಯಿತು.

Share this article