ಬಸವನಬಾಗೇವಾಡಿ: ಮಾಡು ಇಲ್ಲವೇ ಮಡಿ ಕರೆ ನೀಡಿದ ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕಾಡಳಿತ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗಾಂಧೀಜಿಯವರ ನಿಸ್ವಾರ್ಥತೆ, ಮಾತೃಭಕ್ತಿ, ಸಾಮಾಜಿಕ ಕಳಕಳಿ, ಸತ್ಯ, ಅಹಿಂಸೆ, ಸಾಮರಸ್ಯ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕಿದೆ.
ಬಸವನಬಾಗೇವಾಡಿ: ಮಾಡು ಇಲ್ಲವೇ ಮಡಿ ಕರೆ ನೀಡಿದ ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ತಾಲೂಕಾಡಳಿತ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಗಾಂಧೀಜಿಯವರ ನಿಸ್ವಾರ್ಥತೆ, ಮಾತೃಭಕ್ತಿ, ಸಾಮಾಜಿಕ ಕಳಕಳಿ, ಸತ್ಯ, ಅಹಿಂಸೆ, ಸಾಮರಸ್ಯ ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕಿದೆ. ಸ್ವಾತಂತ್ರ್ಯದ ಹೋರಾಟಗಾರರನ್ನು ಸ್ಮರಿಸುವ ಮೂಲಕ ಸಿಕ್ಕ ಸ್ವಾತಂತ್ರ್ಯವನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ. ದೇಶ ಇಂದು ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ವಿವಿಧೆತೆಯಲ್ಲಿ ಏಕತೆ ಸಾರುವ ದೇಶ ನಮ್ಮದು. ದೇಶದ ಪ್ರಗತಿಗೆ ನಾವೆಲ್ಲರೂ ಕೈಜೋಡಿಸಬೇಕೆಂದರು.ವೇದಿಕೆಯಲ್ಲಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ, ಕ್ಷೇತ್ರಸಮನ್ವಯಾಧಿಕಾರಿ ಸುನೀಲ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಮಾಜಿ ಸೈನಿಕರಾದ ರುದ್ರಗೌಡ ಬಿರಾದಾರ, ಎಸ್.ಬಿ.ಕೊಟ್ರಶೆಟ್ಟಿ, ಶಿವು ಅಡಗಿಮನಿ, ಮಲಕಪ್ಪ ತಳವಾರ, ಭೀಮಣ್ಣ ವಡ್ಡರ ಇದ್ದರು. ಶಿವಾನಂದ ಮಂಗಾನವರ ಸ್ವಾಗತಿಸಿದರು. ಕೊಟ್ರೇಶ ಹೆಗ್ಡಾಳ, ಬಿ.ವ್ಹಿ.ಚಕ್ರಮನಿ ನಿರೂಪಿಸಿದರು. ಎಸ್.ಎಸ್.ಅವಟಿ ವಂದಿಸಿದರು.
ಸಮಾರಂಭದಲ್ಲಿ ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ,ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು, ಪೌರಕಾರ್ಮಿಕರನ್ನು, ಜಿಲ್ಲಾ ಕಾನಿಪ ಸಂಘದ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರಾದ ಬಸವರಾಜ ನಂದಿಹಾಳ, ಪ್ರಕಾಶ ಬೆಣ್ಣೂರ ಅವರನ್ನು ತಾಲೂಕಾಡಳಿತದಿಂದ ಸನ್ಮಾನಿಸಲಾಯಿತು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.