ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ, ವಾರ್ಡ್‌ಸಭೆ । ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ನರೇಗಾ ಯೋಜನೆಯಡಿ ಗ್ರಾಮಸ್ಥರು, ರೈತರು ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದಾಗಿದೆ. ಗ್ರಾಪಂ ಹಾಗೂ ಅನುಷ್ಠಾನ ಇಲಾಖೆಗಳಾದ ತೋಟಗಾರಿಕೆ, ಕೃಷಿ, ಅರಣ್ಯ,ರೇಷ್ಮೆ ಇಲಾಖೆಗಳಿಂದ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಅವಕಾಶ ಇರುತ್ತದೆ. ರೈತರು ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಗಮೇಶ ತೇರಿನ ಹೇಳಿದರು.
ತಾಲೂಕಿನ ಲೇಬಗೇರಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾಮನೂರು ಗ್ರಾಮದಲ್ಲಿ 2025-26ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಕೆ ಕುರಿತು ಜರುಗಿದ 2025-26ನೇ ಸಾಲಿನ ಸಾಲಿನ ವಾರ್ಡ್‌ಸಭೆಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವಿಕೆ ಕುರಿತು ತಿಳಿಸಿದರು.ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ಗ್ರಾಮ ಪಂಚಾಯತಿಯಿಂದ ಕಾಮಗಾರಿ ಬೇಡಿಕೆ ಪಡೆಯಲು ವಾರ್ಡ್‌ಸಭೆ ಜರುಗಿಸಲಾಗುತ್ತಿದೆ. ಕೂಲಿಕಾರರ, ರೈತರ ಬೇಡಿಕೆ ಸಲ್ಲಿಸಲು ಇದೊಂದು ಸದಾವಕಾಶ ಇರುವುದರಿಂದ ಯಾವ ಕಾಮಗಾರಿ ಅವಶ್ಯಕತೆ ಇದೆ ಎಂಬುದನ್ನು ಮನದಟ್ಟು ಮಾಡಿಕೊಂಡು ಕಾಮಗಾರಿ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು.
ಮಾಡಿಕೊಳ್ಳಲು ಅವಕಾಶ ಇದೆ. ಅದನ್ನು ಬಳಕೆ ಮಾಡಿಕೊಳ್ಳಲು ತಿಳಿಸಿದರು.