ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಿ

KannadaprabhaNewsNetwork |  
Published : Jun 22, 2025, 01:18 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿಯಿಂದ ಯೋಗಾ ಡೇ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ದೈಹಿಕ ಹಾಗೂ ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ದಿನಚರಿಯನ್ನಾಗಿ ರೂಢಿಸಿಕೊಳ್ಳಬೇಕೆಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ: ದೈಹಿಕ ಹಾಗೂ ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ದಿನಚರಿಯನ್ನಾಗಿ ರೂಢಿಸಿಕೊಳ್ಳಬೇಕೆಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಧಾರವಾಡ ಬಾಲ ವಿಕಾಸ ಅಕಾಡೆಮಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಯೋಗವನ್ನು ಪಾಶ್ಚಿಮಾತ್ಯ ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮ್ಮ ದೇಶಕ್ಕಿದೆ. ಈ ದಿನ ದೇಶ- ವಿದೇಶಗಳಲ್ಲೂ ಅಂತಾರಾಷ್ಟ್ರೀಯ ಯೋಗ ದಿನ ಅಚರಿಸಲಾಗುತ್ತಿದ್ದು, ಯೋಗವು ಪ್ರಪಂಚದಾದ್ಯಂತ ಜನಪ್ರಿಯವಾಗಿದೆ. ಈ ಬಾರಿಯ ಘೋಷ ವಾಕ್ಯ ಒಂದು ಆರೋಗ್ಯ ಒಂದು ಭೂಮಿ ಎಂಬುದಾಗಿದೆ ಎಂದರು.

ಸಾಮೂಹಿಕ ಯೋಗಾಭ್ಯಾಸ

ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಷಗಳ ಕಾಲ ಯೋಗ ಪ್ರಾತ್ಯಕ್ಷಿಕೆ ಮಾಡಿಸಲಾಯಿತು. ಸುನೀತಾ ಬಿರಾದಾರ, ಜ್ಯೋತಿ, ಗೀತಾಂಜಲಿ ದಾಸರ, ಶುಭಂ ಅವರು ಯೋಗಾಸನ ಮತ್ತು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು.

ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ, ಎಡಿಸಿ ಸೋಮಲಿಂಗ ಗೆಣ್ಣೂರ, ವಿವಿಧ ಇಲಾಖೆಗಳ ಅಧಿಕಾರಿಗಳಾದ ವಿಜಯಕುಮಾರ ಅಜೂರ, ಕೆ.ಕೆ.ಚವ್ಹಾಣ, ಡಾ.ವಿದ್ಯಾವತಿ ಅಥಣಿ, ಡಾ.ಶಿವಾನಂದ ಮಾಸ್ತಿಹೊಳಿ, ರಾಜಶೇಖರ ದೈವಾಡಿ, ಸಂತೋಷ ಭೋವಿ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಸಂಸ್ಥೆ, ಆಯುರ್ವೇದ, ಯುನಾನಿ, ಎನ್‌ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ