ವಿವಿಧ ಬೇಡಿಕೆ ಈಡೇರಿಸಲು ವೈದ್ಯರ ಆಗ್ರಹ: ಶಶಿಕುಮಾರ್

KannadaprabhaNewsNetwork |  
Published : Feb 28, 2026, 03:30 AM IST
ಪೋಟೋ: 27ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್‌ಕುಮಾರ್ ಮಾತನಾಡಿದರು.  | Kannada Prabha

ಸಾರಾಂಶ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.11ರಿಂದ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಅಧಿಕಾರಿಗಳು, ನೌಕರರು, ಕಪ್ಪುಬಟ್ಟೆ ಧರಿಸಿ, ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳು, ಶಿವಮೊಗ್ಗ ಜಿಲ್ಲಾ ಶಾಖೆ ಜಂಟಿಯಾಗಿ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.11ರಿಂದ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಅಧಿಕಾರಿಗಳು, ನೌಕರರು, ಕಪ್ಪುಬಟ್ಟೆ ಧರಿಸಿ, ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಎಲ್ಲಾ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿವೆ. ಇಲಾಖೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಆಸ್ಪತ್ರೆಗಳಿಗೆ ಔಷಧಿಯನ್ನು ಪೂರೈಸುವಂತೆ ಒತ್ತಾಯಿಸಿ, ಹಲವು ಬಾರಿ ಇಲಾಖೆಯ ಸಚಿವರುಗಳೊಂದಿಗೆ ಸಭೆ ನಡೆಸಿದ್ದೇವೆ. ಫೆ.13 ರಂದು ಕೂಡ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಆದರೆ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬಾರದೇ ಇರುವುದರಿಂದ ಮುಂದಿನ ಹಂತವಾಗಿ ಮುಷ್ಕರ ನಡೆಸಲು ತೀರ್ಮಾನಿಸಲಾಯಿತು ಎಂದರು.

ಮಾ.11ರಿಂದ ಮಾ.15ರವರೆಗೆ ಮುಷ್ಕರ ಮಾಡುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ಧಿಷ್ಟ ಅವಧಿವರೆಗೆ ಗೈರು ಹಾಜರಾಗುವ ಮೂಲಕ ನಮ್ಮ ಮುಷ್ಕರವನ್ನು ಮುಂದುವರೆಸುತ್ತೇವೆ. ಸರ್ಕಾರ ಇದಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಮ್ಮ ಪ್ರಮುಖ ಬೇಡಿಕೆಗಳೆಂದರೆ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಕಾಲ ಕಾಲಕ್ಕೆ ಔಷಧಿಯನ್ನು ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಅವಕಾಶ ಇದ್ದರೂ ಕೂಡ ಅದನ್ನು ಉಲ್ಲಂಘನೆ ಮಾಡಲಾಗಿದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ್‌ ಕುಮಾರ್ ಮಾತನಾಡಿ, ಆರೋಗ್ಯ ಇಲಾಖೆಯವರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘದ ಬೆಂಬಲವಿದೆ ಎಂದರು.

ಪ್ರಮುಖರಾದ ಡಾ.ನಾಗೇಂದ್ರಪ್ಪ, ಡಾ. ನಾಗರಾಜ್‌ನಾಯ್ಕ, ಪಾಪಣ್ಣ, ಮ.ಸ. ನಂಜುಂಡಸ್ವಾಮಿ, ಶಂಕರ್, ಪಿ.ಮಂಜುಳಾ, ಇಂದಿರಮ್ಮ, ಡಾ. ಗುಡದಪ್ಪ, ಅಶೋಕ್, ನರಸಿಂಹ, ವಿಜಯ್ ಆಂಟೋನಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಯಲ್ಲಿ ಕುಡಿವ ನೀರಿನ ಬಗ್ಗೆ ಎಚ್ಚರವಿರಲಿ
ಶಾಲಾ ಕಾಲೇಜುಗಳು ಮೊದಲು ನಶಾಮುಕ್ತವಾಗಲಿ:ಡಾ.ಭಗವಾನ್