ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಹಮ್ಮಿಕೊಂಡಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ 28ನೇ ಘಟಿಕೋತ್ಸವದಲ್ಲಿ ಆರೋಗ್ಯ ಕ್ಷೇತ್ರದ ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ‘ಆರೋಗ್ಯಕರ ಭಾರತ’ ಮತ್ತು ‘ವಿಕಸಿತ ಭಾರತ-2047’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ವೈದ್ಯಕೀಯ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಆರೋಗ್ಯ ಸೇವೆ, ತಾಯಿ ಮತ್ತು ಶಿಶು ಆರೋಗ್ಯ, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ಸಾರ್ವಜನಿಕ ಜಾಗೃತಿ ಕ್ಷೇತ್ರಗಳಲ್ಲಿ ಯುವ ವೈದ್ಯರ ಕೊಡುಗೆ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖವಾಗಲಿದೆ ಎಂದು ಹೇಳಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚು ಆರೋಗ್ಯ ವಿಜ್ಞಾನ ಕಾಲೇಜುಗಳಿವೆ. ಪ್ರತಿ ವರ್ಷ 72 ಸಾವಿರ ಆರೋಗ್ಯ ವಿಜ್ಞಾನ ಪದವೀಧರರನ್ನು ನೀಡುತ್ತಿದೆ. ವರ್ಷಕ್ಕೆ 13,940 ವೈದ್ಯರು ಪದವಿ ಪೂರೈಸುತ್ತಾರೆ. ವೈದ್ಯ ಪದವಿ ಪಡೆದು ಹೊರ ಬಂದವರು ಕೇವಲ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದರ ಬಗ್ಗೆ ಮಾತ್ರ ಗಮನ ಹರಿಸಬಾರದು. ಗ್ರಾಮೀಣ ಪ್ರದೇಶದಲ್ಲೂ ಆರೋಗ್ಯ ಸೇವೆ ಒದಗಿಸುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಮಾತನಾಡಿ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಕ್ಯಾನ್ಸರ್ ಆಸ್ಪತ್ರೆ ಹಾಗೂ ಟ್ರೋಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಜನರಿಗೆ ಇಲ್ಲಿಯೇ ಅತ್ಯುತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆಗಳನ್ನು ಪಡೆಯಬೇಕು ಎಂಬುದು ಸರ್ಕಾರದ ಆಶಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್, ಕುಲಸಚಿವ ಅರ್ಜುನ್ ಒಡೆಯರ್, ಮೌಲ್ಯಮಾಪನ ಕುಲಸಚಿವ ಡಾ. ರಿಯಾಜ್ ಬಾಷಾ ಹಾಜರಿದ್ದರು. 103 ವಿದ್ಯಾರ್ಥಿಗಳಿಗೆ ಚಿನ್ನದ ಪದಕ:
ಗೌರವ ಡಾಕ್ಟರೇಟ್ :