ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಜಿಲ್ಲೆಯಲ್ಲಿ ಬೆಳೆಯುತ್ತಿರುವ ಪಟ್ಟಣಗಳಲ್ಲಿ ಸುಂಟಿಕೊಪ್ಪ ಒಂದಾಗಿದ್ದು ಹೋಬಳಿ ಕೇಂದ್ರವಾಗಿದೆ. ಸುಂಟಿಕೊಪ್ಪ ಪಟ್ಟಣದ ನಡುವೆಯೇ 275 ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಕನಿಷ್ಠ ಮೂಲಭೂತ ಸೌಲಭ್ಯಗಳು ಇಂದಿಗೂ ದೊರೆತಿಲ್ಲ.
ಸುಂಟಿಕೊಪ್ಪ, ಕೆದಕಲ್, ಕಂಬಿಬಾಣೆ, ಕೊಡಗರಹಳ್ಳಿ, 7ನೇ ಹೊಸಕೋಟೆ, ಹರದೂರು, ನಾಕೂರು ಶಿರಂಗಾಲ ಗ್ರಾಮಗಳನ್ನು ಒಳಗೊಂಡಿರುವ ಗ್ರಾಮಕ್ಕೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಒಳಗೊಂಡಿದೆ. ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಿಂದಾಗ್ಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತದೆ.ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳು ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಜನ ಸಂಖ್ಯೆಯ ಜೊತೆಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯು ಸುಂಟಿಕೊಪ್ಪ ಪಟ್ಟಣದಲ್ಲಿ ಹಾದು ಹೋಗಿದ್ದು, ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಅಪಘಾತಗಳು ಸಾಮಾನ್ಯ ಎಂಬಂತಾಗಿದೆ.
ಮೂಲತಃ ಕೊಡಗಿನವರಾಗಿ ಹಾಲಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಈ ಆಸ್ಪತ್ರೆಗೆ ಭೇಟಿ ನೀಡಿ ಇಲ್ಲಿಯ ಎಲ್ಲ ಕುಂದು ಕೊರತೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು 2 ವರ್ಷಗಳೇ ಸಮೀಪಿಸುತ್ತಿದ್ದರೂ ಊರಿನವರ ಬಹುನಿರೀಕ್ಷೆಗೆ ಸ್ಪಂದನೆ ದೊರಕದಿರುವುದು ಜನರಿಗೆ ನಿರಾಸೆ ಮೂಡಿಸಿದೆ.
ಕೆದಕಲ್, ಕಂಬಿಬಾಣೆ, ಕೊಡಗರಹಳ್ಳಿ, 7ನೇ ಹೊಸಕೋಟೆ, ಹರದೂರು, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇವಲ ಆರೋಗ್ಯ ಉಪಕೇಂದ್ರಗಳು ಮಾತ್ರ ಕಾರ್ಯಾಚರಿಸುತ್ತಿದೆ. ಆದರೆ ಈ ಎಲ್ಲ ಗ್ರಾಮದ ಜನತೆಯು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿತರಾಗಿದ್ದಾರೆ. ಈ ಗ್ರಾಮಗಳಲ್ಲಿ ನೆಲೆಸಿರುವ ಮಂದಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾದಾಗ ಅನಾರೋಗ್ಯ ಪೀಡಿತರನ್ನು ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯಲು 108 ವಾಹನಗಳು ಇಲ್ಲದ ಕಾರಣ ಖಾಸಗಿ ವಾಹನಗಳ ಮೂಲಕ ಸಾಗಿಸುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದರಿಂದ ಬಡ ರೋಗಿಗಳು ಆರೋಗ್ಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ.
। ಕೆ.ಎ.ಲತೀಫ್, ಎಸ್‌ಡಿಟಿಯು ಸಂಘಟನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ
। ಮಂದೋಡಿ ಜಗನ್ನಾಥ್ , ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ
। ಆರ್.ಆರ್. ಮೋಹನ್, ಕಂಬಿಬಾಣೆ ಗ್ರಾಮ ಪಂಚಾಯಿತಿ ಸದಸ್ಯ
। ಇ.ಬಿ.ಜೋಸೆಫ್ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ
ಕೆದಕಲ್ ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿರುವ ಗ್ರಾಮವಾಗಿದ್ದು, ಕೂಲಿ ಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಗ್ರಾಮದಲ್ಲಿ ಕಾಡಾನೆ ಹಾಗೂ ವನ್ಯಹಾವಳಿಯಿದ್ದು, ಕಿರಿದಾದ ರಸ್ತೆಯನ್ನು ಒಳಗೊಂಡ ಗ್ರಾಮವಾಗಿದೆ. ಈ ಗ್ರಾಮದಲ್ಲಿ ಆರೋಗ್ಯ ಸಮಸ್ಯೆ ಹಾಗೂ ವನ್ಯ ಪ್ರಾಣಿಗಳ ದಾಳಿಗೀಡಾದರೆ ಪ್ರಾಥಮಿಕ ಚಿಕಿತ್ಸೆಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಬೇಕಾಗಿದೆ. 108 ತುರ್ತು ವಾಹನ ಕಳೆದೊಂದು ವರ್ಷದಿಂದ ದುರಸ್ತಿಗೀಡಾಗಿರುವುದು, ಸಾರ್ವಜನಿಕರ ಸೌಲಭ್ಯಕ್ಕೆ ಲಭಿಸದೆ ಇರುವ ವಾಹನದ ಬಗ್ಗೆ ಮೇಲಾಧಿಕಾರಿಗಳು ಜಾಣಮೌನ ವಹಿಸಿರುವುದು ಹತ್ತು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.। ಸಂಜುಪೊನ್ನಪ್ಪ, ಕೆದಕಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವು ಮೂಲಭೂತ ಸೌಲಭ್ಯ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಸಲ್ಲಿಸುತ್ತಾ ಬರಲಾಗುತ್ತಿದ್ದರೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ದಿನದಿಂದ ದಿನಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದರಿಂದ ಮತ್ತೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿದೆ. ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದು ಸಂಬಂಧಿಸಿದ ಅಧಿಕಾರಿ ಇಲಾಖೆಗೆ ಪತ್ರಗಳನ್ನು ಕಳುಹಿಸಲಾಗುತ್ತಿದ್ದರೂ ಇಂದಿಗೂ ಸಮಸ್ಯೆ ಪರಿಹಾರಕ್ಕೆ ಮುಂದಾಗದಿರುವುದು ಗ್ರಾಮಸ್ಥರಿಂದ ಜನಪ್ರತಿನಿಧಿಗಳಾದ ನಮಗೆ ಛೀಮಾರಿ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಿಸಿದ ಶಾಸಕರು, ಜಿಲ್ಲಾ ಕುಟುಂಬ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.। ಪಿ.ಆರ್.ಸುನಿಲ್ ಕುಮಾರ್ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ