ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕರಸೇವಕರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಗುರುವಾರ ಸನ್ಮಾನಿಸಲಾಯಿತು.ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು. ಬಳಿಕ ನಮೋ ಬ್ರಿಗೇಡ್ ರಾಜ್ಯ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅವರು ಕರಸೇವಕರ ಹೋರಾಟಗಳ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೊ ಪ್ರದರ್ಶಿಸಲಾಯಿತು. ಸನ್ಮಾನ ಸ್ವೀಕರಿಸಿದ ಕರಸೇವಕರು ಮೆಚ್ಚುಗೆ ಸೂಚಿಸಿದರು.ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ.ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದ್ದರು. ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿರ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಮತ್ತಿತರರು ಇದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.