ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ಆರತಿ ಉತ್ಸವದ ಭಾಗವಾಗಿ ದೊಡ್ಡಬಳ್ಳಾಪುರ ನಗರ, ಶಾಂತಿನಗರ, ದರ್ಗಾಜೋಗಿಹಳ್ಳಿ, ನಾಗಸಂದ್ರ, ಕೊಡಿಗೇಹಳ್ಳಿ, ಕುರುಬರಹಳ್ಳಿ ಮತ್ತು ರೋಜಿಪುರ ಗ್ರಾಮಗಳಿಂದ ನೂರಾರು ಮಹಿಳೆಯರು ಹೊಂಬಾಳೆ ಹಾಗೂ ತಂಬಿಟ್ಟಿನ ಆರತಿಗಳನ್ನು ಮೆರವಣಿಗೆಯಲ್ಲಿ ತಂದು ಶ್ರೀಮಾತೆಗೆ ಅರ್ಪಿಸಿದರು.
ರಥೋತ್ಸವದಲ್ಲಿ ಸಹಸ್ರಾರು ಜನ ಭಾಗಿ:ಶ್ರೀ ಮುತ್ಯಾಲಮ್ಮ ಸೇವಾ ದತ್ತಿ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಜಾತ್ರಾ ಮಹೋತ್ಸವದ ಭಾಗವಾಗಿ ಮಂಗಳವಾರ ಬೆಳಗ್ಗೆ 10.30ಕ್ಕೆ ದೇವಾಲಯದಿಂದ ರಥೋತ್ಸವವು ಆರಂಭವಾಯಿತು. ಶಾಂತಿನಗರದ ಮುಖ್ಯರಸ್ತೆ ಮೂಲಕ ಮುಗುವಾಳಪ್ಪ ವೃತ್ತದವರೆಗೆ ಸಂಚರಿಸಿ ಬಳಿಕ ದೇವಾಲಯಕ್ಕೆ ಹಿಂದಿರುಗಿತು. ವಿವಿಧೆಡೆ ಅರವಂಟಿಕೆಗಳು ಆಯೋಜನೆಗೊಂಡಿದ್ದವು. ಸಹಸ್ರಾರು ಜನರು ಪಾಲ್ಗೊಂಡು ಮುತ್ಯಾಲಮ್ಮ ದೇವಿ ಹಾಗೂ ದೊಡ್ಡಮ್ಮ ದೇವಿಗೆ ಪೂಜೆ ಸಲ್ಲಿಸಿ, ಆರತಿಗಳನ್ನು ಅರ್ಪಿಸಿದರು.
ಶ್ರೀ ಮುತ್ಯಾಲಮ್ಮ ಸಾಂಸ್ಕೃತಿಕ ಸೇವಾ ಸಮಿತಿಯಿಂದ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ರಥೋತ್ಸವದ ವೇಳೆ ಹಲವು ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಿದ್ದವು. ಡೊಳ್ಳುಕುಣಿತ, ಶಿವತಾಂಡವ, ವೀರಗಾಸೆ, ಭದ್ರಕಾಳಿ, ಗಾರುಡಿ ಗೊಂಬೆಗಳು, ಮರಗಾಲು ಮನುಷ್ಯ, ವೀರಭದ್ರನ ಕುಣಿತ, ಪೂಜಾ ಕುಣಿತ, ತಮಟೆ, ಡ್ರಮ್ಸ್ ಸೇರಿ ಹಲವು ತಂಡಗಳು ಪಾಲ್ಗೊಂಡಿದ್ದವು. ರಥೋತ್ಸವ ಮತ್ತು ಜಾತ್ರೆ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಇಡೀ ಆವರಣವನ್ನು ವಿದ್ಯುದ್ದೀಪಾಲಂಕಾರದಿಂದ ಆಕರ್ಷಣೀಯಗೊಳಿಸಲಾಗಿತ್ತು.
ಈ ಬಾರಿಯ ವಿಶೇಷವಾಗಿ ನಗರದೇವತೆ ಮುತ್ಯಾಲಮ್ಮ ದೇವಿ ಮೂಲ ವಿಗ್ರಹಕ್ಕೆ ಆದಿಶಕ್ತಿ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ರೂಪಿಸಲಾಗಿದ್ದ ಈ ಅಲಂಕಾರ ಭಕ್ತಾದಿಗಳ ವಿಶೇಷ ಆಕರ್ಷಣೆಗೆ ಪಾತ್ರವಾಯಿತು. ಹಗಲು ಪರಿಷೆ:
ವಿವಿಧೆಡೆ ಅರವಂಟಿಗೆ: