ದೊಡ್ಡಬಳ್ಳಾಪುರ: ಇಲ್ಲಿನ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್, ಕೇಂದ್ರ ಸರ್ಕಾರದ ಅಮೃತ್ ಭಾರತ್ ಯೋಜನೆಯಡಿ ₹25.42 ಕೋಟಿ ವೆಚ್ಚದಲ್ಲಿ ಪುನರ್ ಅಭಿವೃದ್ದಿಪಡಿಸಲಾಗುತ್ತಿರುವ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಮೂಲಸೌಕರ್ಯ ಉನ್ನತೀಕರಣ:
ಅಮೃತ್ ಭಾರತ್ ಯೋಜನೆಯು ನಮ್ಮ ದೇಶದ ರೈಲ್ವೆ ಮೂಲಸೌಕರ್ಯವನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರವು ಇಟ್ಟಿರುವ ಒಂದು ದೂರದೃಷ್ಟಿಯ ಹೆಜ್ಜೆಯಾಗಿದೆ. ದೊಡ್ಡಬಳ್ಳಾಪುರದ ಜನರಿಗೆ ಸುರಕ್ಷಿತ, ಅನುಕೂಲಕರ ಮತ್ತು ನಮ್ಮ ಇಡೀ ಕ್ಷೇತ್ರದ ಪ್ರಗತಿಯ ಸಂಕೇತವಾಗಿರುವ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ. ಈ ಯೋಜನೆಯು ಬೆಂಗಳೂರು ಗ್ರಾಮಾಂತರ ವಲಯದಾದ್ಯಂತ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ಸುಧಾರಿಸಲು ನಡೆಯುತ್ತಿರುವ ಪ್ರಯತ್ನಗಳ ಪ್ರಮುಖ ಭಾಗವಾಗಿದೆ ಎಂದರು.ಅತ್ಯಾಧುನಿಕ ಸೌಲಭ್ಯ:
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಅಭಿವೃದ್ಧಿಗೊಳ್ಳುತ್ತಿರುವ ರೈಲ್ವೆ ನಿಲ್ದಾಣದ ವಿಶೇಷತೆ:
ಹೊಸ ಎರಡನೇ ಪ್ರವೇಶ ದ್ವಾರದ ಕಟ್ಟಡ ಮತ್ತು ನಿಲ್ದಾಣದ ಎರಡೂ ಬದಿಗಳಲ್ಲಿ ಸುಸಜ್ಜಿತ ದ್ವಿಚಕ್ರ ಮತ್ತು ನಾಲ್ಕು-ಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶಗಳು. ಆಧುನಿಕ ಪ್ರಯಾಣಿಕರ ಸೌಲಭ್ಯಗಳಾದ ಹೊಸ ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ದಿವ್ಯಾಂಗರ ಸೌಲಭ್ಯಗಳನ್ನು ಒಳಗೊಂಡ ಆಧುನಿಕ ''''''''ಪಾವತಿಸಿ ಮತ್ತು ಬಳಸಿ'''''''' ಶೌಚಾಲಯಗಳು, ಮತ್ತು ಪಾದಚಾರಿ ಮಾರ್ಗ ಸುಧಾರಿತ ಮುಖ್ಯ ಸಂಪರ್ಕ ರಸ್ತೆಗಳನ್ನು ಒಳಗೊಂಡಿರುತ್ತದೆ.
17ಕೆಡಿಬಿಪಿ2- ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಕೆ.ಸುಧಾಕರ್ ಅಮೃತ ಭಾರತ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.