ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತೋವಿವಿ ಆವರಣದಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಹಿರೇಪಡಸಲಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ವೈಜ್ಞಾನಿಕ ಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಚನ ಸಾಹಿತ್ಯದ ಮೂಲಕ ಶರಣರು ವಿವರಿಸಿರುವ ಕೆಲ ಮೌಢ್ಯಾಚರಣೆಗಳನ್ನು ಹೋಗಲಾಡಿಸುವ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರೂಪಾ.ವಿ.ಕೆ ಮಾತನಾಡಿ, ಅರಣ್ಯ ಮತ್ತು ಪರಿಸರಕ್ಕೆ ಸಂಬಂಧಿಸಿದ ಕೆಲ ಮೌಢ್ಯ ಆಚರಣೆಗಳನ್ನು ತಿಳಿಸುತ್ತಾ ಇಂತಹ ಮೌಢ್ಯ ಆಚರಣೆಗಳಿಂದ ದೂರವಿರುವಂತೆ ಹಾಗೂ ಗಿಡಮರ ನೆಡುವುದರ ಮೂಲಕ ಪರಿಸರ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಿರೇಪಡಸಲಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಿ.ಸಿ. ಕಲ್ಯಾಣಿ ಮಾತನಾಡಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ತಾಂತ್ರಿಕ ಸಹಾಯಕ ಆಸೀಫ್ ಬಾಗವಾನ ಅವರು ಕೆಲ ಪ್ರಾತ್ಯಕ್ಷಿಕೆಗಳ ಮೂಲಕ ಮೂಢನಂಬಿಕೆಗಳ ಹಿಂದಿನ ವೈಜ್ಞಾನಿಕ ಸತ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ತಿಳಿಸಿದರು.