ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಕ್ಷಕ ಇಲಾಖೆ ಮತ್ತು ಅಬಕಾರಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆದಲ್ಲಿ ಮಾತನಾಡಿ, ಮಾದಕ ವಸ್ತುಗಳ ಸೇವನೆಗೆ ಹೆಚ್ಚಾಗಿ ವಿದ್ಯಾರ್ಥಿಗಳೇ ದಾಸರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಆಯ್ಕೆ ಮಾಡಿಕೊಳ್ಳುವ ಸ್ನೇಹಿತ ವರ್ಗ, ಭವಿಷ್ಯದ ಗುರಿ ಇಲ್ಲದಿರುವುದೇ ಕಾರಣ ಎಂದರು.
ವಿದ್ಯಾರ್ಥಿಗಳ ಜೀವನದಲ್ಲಿ ಸಾಧನೆ ಮಾಡಲು ಗುರಿ ಇರಬೇಕು. ಗುರಿ ಮುಟ್ಟಲು ಶ್ರಮ ಪಡಬೇಕು. ಆದರೆ, ಪರಿಶ್ರಮವಿಲ್ಲದೇ ದೇಶದ ಮುಂದಿನ ಶಕ್ತಿಯಾಗಬೇಕಿರುವ ಯುವ ಜನತೆ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದು ಇದರಿಂದ ಸದಾ ದೂರವಿರಬೇಕು. ವಿದ್ಯಾರ್ಥಿಗಳು ಜ್ಞಾನಾರ್ಜನಗೆ ಮೊದಲ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದು ಶಿಕ್ಷರ್ಹ ಅಪರಾಧ. ಭವ್ಯಭಾರತದ ಪ್ರಜೆಗಳಾದ ನೀವು ಜೀವನದಲ್ಲಿ ಯಶಸ್ಸು ಸಾಧಿಸಲು ಕೆಟ್ಟ ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಕುಟುಂಬದಲ್ಲಿ ಕೆಲವು ಹಿರಿಯರು ಕೆಲಸ ಮಾಡಿ ಆಯಾಸವಾಗಿದೆ ಎಂದು ಮಾದಕ ವಸ್ತುಗಳ ಸೇವನೆ ಮಾಡುತ್ತರೆ. ಆದರೆ, ಇದು ಮನೆಯಲ್ಲಿರುವ ಮಕ್ಕಳ ಮೇಲೆ ಪರಿಣಾಮ ಬೀರಿ ಮಕ್ಕಳು ಸಹ ದುಶ್ಚಟಕ್ಕೆ ಬಲಿಯಾಗುತ್ತರೆ. ಇದನ್ನು ಅರ್ಥಮಾಡಿಕೊಂಡು ಪೋಷಕರು ಸದಾ ಮಕ್ಕಳಿಗೆ ಉತ್ತಮ ಅಭ್ಯಾಸ ರೂಡಿಸಿಸುವ ರೀತಿ ಮಾದರಿಯಾಗಿ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಗಂಗಾಧರ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.