ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಪಾತ ಮಾಡಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

KannadaprabhaNewsNetwork |  
Published : Aug 29, 2024, 12:51 AM IST
27ಎಮ್‌ಡಿಎಲ್‌ಜಿ2ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಲ್ಲೊಳ್ಳಿ ಪ.ಪಂ ನೂತನ ಅಧ್ಯಕ್ಷೆ ಮಾಯವ್ವ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಭೇಟಿ ಮಾಡಿ ಅಭಿನಂದಿಸಿದರು. | Kannada Prabha

ಸಾರಾಂಶ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಲ್ಲೊಳ್ಳಿ ಪಪಂ ನೂತನ ಅಧ್ಯಕ್ಷೆ ಮಾಯವ್ವ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಭೇಟಿ ಮಾಡಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಬಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪಪಂ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಕಿವಿಮಾತು ಹೇಳಿದರು.

ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮಿಟಿಯವರು ಶ್ರಮಿಸುವಂತೆ ಸಲಹೆ ನೀಡಿದರು.ಕಲ್ಲೊಳ್ಳಿ ಪಟ್ಟಣದ ಅಭಿವೃದ್ಧಿಗಾಗಿ ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ನಾನಾ ಯೋಜನೆಗಳನ್ನು ರೂಪಿಸುವ ಮೂಲಕ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ಈ ಮೂಲಕ ಜನರ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರದಿಂದ ಸಿಗುವ ಬಹುತೇಕ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಅಭಿವೃದ್ಧಿಗಾಗಿ ಹಣದ ಹೊಳೆಯೇ ಹರಿಸಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಅನುದಾನವನ್ನೇ ನೀಡುತ್ತಿಲ್ಲ. ಈ ಕಾರಣದಿಂದ ಹೊಸ ಹೊಸ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸತ್ಕರಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಈರಪ್ಪ ಹೆಬ್ಬಾಳ, ಪರಪ್ಪ ಕಡಾಡಿ, ಮಲ್ಲಪ್ಪ ಖಾನಾಪೂರ, ಬಸವಂತ ದಾಸನವರ, ಬಸವರಾಜ ಯಾದಗೂಡ, ಭೀಮಶೆಪ್ಪ ಗೋರೋಶಿ, ಮಹಾಂತೇಶ ಕಪ್ಪಲಗುದ್ದಿ, ರಾಮಣ್ಣ ದಾಸನಾಳ, ಪರಸಪ್ಪ ಮಕ್ಕಳಗೇರಿ, ರಾಮಣ್ಣ ಕಂಕಣವಾಡಿ, ದತ್ತು ಕಲಾಲ, ಕಲ್ಲಪ್ಪ ಇಟ್ನಾಳ, ಬಸು ಜಗದಾಳ, ಪಟ್ಟಣ ಪಂಚಾಯತಿ ಸದಸ್ಯರು, ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ಶಾಸಕ ಸೈಲ್‌ ಮನೇಲಿದ್ದ 6.75 ಕೇಜಿ ಚಿನ್ನ ಜಪ್ತಿ!
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!