ವಿಜ್ಞಾನದ ವಿದ್ಯಾರ್ಥಿಗಳಲ್ಲಿ ತಾಳ್ಮೆ ಮತ್ತು ದೃಢತೆ ಬಹಳ ಮುಖ್ಯ. ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವವರು ಸೋಲುಗಳಿಗೆ ಎದೆಗುಂದದೆ ಸತತ ಪ್ರಯತ್ನ ನಡೆಸಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀನಿವಾಸ ಎಸ್. ಅವರು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ, ತುಮಕೂರು
ವಿಜ್ಞಾನದ ವಿದ್ಯಾರ್ಥಿಗಳಲ್ಲಿ ತಾಳ್ಮೆ ಮತ್ತು ದೃಢತೆ ಬಹಳ ಮುಖ್ಯ. ಸಂಶೋಧನೆಯಲ್ಲಿ ತೊಡಗಿಸಿಕೊಳ್ಳುವವರು ಸೋಲುಗಳಿಗೆ ಎದೆಗುಂದದೆ ಸತತ ಪ್ರಯತ್ನ ನಡೆಸಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀನಿವಾಸ ಎಸ್. ಅವರು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ ಸಿ.ವಿ. ರಾಮನ್ ಅವರ ಸಾಧನೆಯನ್ನು ಸ್ಮರಿಸಿದ ಅವರು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗಣಿತಶಾಸ್ತ್ರ ವಿಭಾಗದಿಂದ ಪ್ರಬಂಧ ಸ್ಪರ್ಧೆ, ಮಾದರಿ ತಯಾರಿಕೆ ಹಾಗೂ ಅಧ್ಯಾಪಕರಿಗಾಗಿ ಕ್ರೀಡಾ ಚಟುವಟಿಕೆಗಳು. ಪ್ರಾಣಿಶಾಸ್ತ್ರ ವಿಭಾಗದಿಂದ ವಿಜ್ಞಾನದಲ್ಲಿ ಮಹಿಳೆ : ವಿಕಸಿತ ಭಾರತ ವಿಷಯದ ಮೇಲೆ ಚಿತ್ರಕಲಾ ಸ್ಪರ್ಧೆ, ಭೌತಶಾಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಭಾಗದಿಂದ ರಸಪ್ರಶ್ನೆ, ವಿಜ್ಞಾನ ಮಾದರಿಗಳ ಪ್ರದರ್ಶನ ಮತ್ತು ಪ್ರಬಂಧ ಸ್ಪರ್ಧೆ, ಜೀವ ರಸಾಯನಶಾಸ್ತ್ರ ಹಾಗೂ ಸ್ನಾತಕೋತ್ತರ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಿಂದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಪ್ರೊ. ಪ್ರಕಾಶ್ ಎಂ. ಶೇಟ್, ಡಾ. ನರಹರಿ, ಡಾ. ಮಲ್ಲೇಶಪ್ಪ ಜೆ., ಡಾ. ಮಂಗಳಗೌರಿ, ಡಾ. ನಿರ್ಮಲ ಬಿ., ಡಾ. ಭಾಗ್ಯಲಕ್ಷ್ಮಿ, ಡಾ. ದ್ವಾರಕನಾಥ್, ಡಾ. ಶಾಲಿನಿ ಬಿ.ಆರ್., ಡಾ. ರಶ್ಮಿ ಹೊಸಮನಿ, ಡಾ. ಅರುಣ್ ಕುಮಾರ್ ಡಿ.ಬಿ., ಡಾ. ಲಲಿತ ಎಚ್.ಎಂ., ಹಾಗೂ ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಬಿ.ಆರ್. ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.