ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ತಪ್ಪು ತಿಳುವಳಿಕೆ ಬೇಡ

KannadaprabhaNewsNetwork |  
Published : Jul 16, 2025, 12:45 AM IST
ಪೋಟೋ: 15ಎಸ್‌ಎಂಜಿಕೆಪಿ05ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ   ರೋಗಿಗಳಿಗೆ ಆರೋಗ್ಯ ಕಿಟ್ ವಿತರಿಸಲಾಯಿತು. | Kannada Prabha

ಸಾರಾಂಶ

ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ. ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ. ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಗಳಿಗೆ ಮಾತ್ರ ಸೀಮಿತವಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ.ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.

ಶಿವಮೊಗ್ಗ: ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ. ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ. ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಗಳಿಗೆ ಮಾತ್ರ ಸೀಮಿತವಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯ ಡಾ.ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿಗೆ ಯಾವುದೇ ವಯೋಮಿತಿ ಇಲ್ಲ, ಲಿಂಗ ಭೇದ ಇಲ್ಲ, ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಇರುವ ಭಯ, ಆತಂಕ ಬೇಡ ತಪ್ಪು ಕಲ್ಪನೆಗಳನ್ನು ಬಿಟ್ಟು ಪ್ಲಾಸ್ಟಿಕ್ ಸರ್ಜರಿ ತಜ್ಞ ವೈದ್ಯರ ಬಳಿ ಚರ್ಚಿಸಿ ಎಂದರು.ಸರ್ಜಿ ಸಮೂಹ ಸಂಸ್ಥೆಗಳ ಪ್ರೊಪ್ರೈಟರ್ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ, ಡಾ.ಚೇತನ್ ಹಲವಾರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ. ಅಪಘಾತದಂತಹ ಸನ್ನಿವೇಶಗಳಲ್ಲಿ ನೋವನ್ನು ನುಂಗಿ ಚಿಕಿತ್ಸೆಯಿಂದ ಗುಣಮುಖರಾಗಿ ಬಂದಿರುವ ರೋಗಿಗಳ ಮುಖದಲ್ಲಿನ ಮಂದಹಾಸ ನಮ್ಮಲ್ಲಿ ಧನ್ಯತೆಯ ಭಾವ ಮೂಡಿಸುತ್ತದೆ. ಭಗವಂತ ಜನ್ಮ ಕೊಟ್ಟರೆ ಅದಕ್ಕೆ ಮರುಜನ್ಮ ಕೊಡುವಂತಹ ಶಕ್ತಿ ಇದೆ ಅಂದರೆ ಅದು ಕೇವಲ ದೈವೀ ಸ್ವರೂಪಿ ವೈದ್ಯರಿಗೆ ಮಾತ್ರ. ಎಷ್ಟೋ ಜನ್ಮಗಳ ನಂತರ ಕೊನೆಯ ಜನ್ಮ ವೈದ್ಯರಾಗಿ ಹುಟ್ಟುವುದು ಈ ಜನ್ಮದಲ್ಲಿ ವೈದ್ಯರಾಗಿ ಸೇವೆ ಮಾಡುವಂತಹ ಅವಕಾಶವನ್ನು ನಾವು ಪಡೆದುಕೊಂಡ್ಡಿದ್ದೆವೆ, ರೋಗಿಗಳ ಸೇವೆಯಲ್ಲಿ ನೆಮ್ಮದಿ ಕಂಡುಕೊಂಡಿದ್ದೇವೆ ಎಂದು ಹೇಳಿದರು.

ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ವಾದಿರಾಜ್ ಕುಲಕರ್ಣಿ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿಯಲ್ಲಿ ಎರಡು ವಿಧ ಇದೆ. ಒಂದು ಸೌಂದರ್ಯ ವರ್ಧಕ ಇನ್ನೊಂದು ಅಪಘಾತವಾದಗ ಮಾಡುವ ಶಸ್ತ್ರ ಚಿಕಿತ್ಸೆ. ಪ್ಲಾಸ್ಟಿಕ್ ಸರ್ಜರಿ ಎಂದು ಕರೆಯಲ್ಪಡುವ ಸುರೂಪಿ ಶಸ್ತ್ರಚಿಕಿತ್ಸೆ ಬಹಳ ಪ್ರಗತಿ ಸಾಧಿಸಿದೆ. ಊನವಾದ ಅಂಗಗಳನ್ನು ಮೊದಲಿನಂತೆ ಸರಿಪಡಿಸುವುದು, ಬೇರೆ ವಿಧಾನಗಳಿಂದ ಅವುಗಳನ್ನು ಮತ್ತೆ ನಿರ್ಮಿಸುವುದು, ವಕ್ರವಾಗಿ ಬೆಳೆದಿರುವ ಅಂಗಗಳನ್ನು ಚಂದವಾಗಿ ಕಾಣುವಂತೆ ಸರಿಪಡಿಸುವುದು ರೋಗಿಗಳ ಪಾಲಿಗೆ ವರದಾನವಾಗಿದೆ ಎಂದು ತಿಳಿಸಿದರು.

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರಶಾಂತ್ ವೀರಯ್ಯ ಮಾತನಾಡಿದರು.

ಇದೇ ವೇಳೆ ರೋಗಿಗಳಿಗೆ ಆರೋಗ್ಯ ಕಿಟ್ ವಿತರಿಸಲಾಯಿತು.

ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕಿ ನಮಿತಾ ಧನಂಜಯ ಸರ್ಜಿ, ನಾಗವೇಣಿ ಸರ್ಜಿ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳಿಧರ್ ರಾವ್ ಕುಲಕರ್ಣಿ, ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ವಿಜಯ್ ಕುಮಾರ ಮಾಯೆರ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿಗಳಾದ ಸಚಿನ್ ಕುಮಾರ್, ಆಸ್ಪತ್ರೆಯ ಮೂಳೆ ರೋಗ ತಜ್ಞ ವೈದ್ಯ ಡಾ.ಮಂಜುನಾಥ್, ವೈದ್ಯ ಡಾ.ಚೇತನ್ ಸಾಗರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ