ನೆಪ್ಪವೊಡ್ಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡದಿರಿ

KannadaprabhaNewsNetwork |  
Published : May 22, 2026, 02:00 AM IST
ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಕ್ಷೇತ್ರದಲ್ಲಿರುವ ಅರ್ಹ ಫಲಾನುಭವಿಗಳಿಗೆ ಮೊದಲು ಹಕ್ಕು ಪತ್ರ ನೀಡಿ. ಎಲ್ಲದಕ್ಕೂ ಅರಣ್ಯ ಇಲಾಖೆ ನೆಪಮಾಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡುತ್ತಿರುವುದು ಸರಿಯಲ್ಲ.

೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಕನ್ನಡಪ್ರಭ ವಾರ್ತೆ ಭದ್ರಾವತಿ

ವಿನಾಕಾರಣ ತಾಲೂಕು ಆಡಳಿತ ಯಾವುದೋ ನೆಪವೊಡ್ಡಿ ಕ್ಷೇತ್ರದಲ್ಲಿ ೫೦-೬೦ ವರ್ಷಗಳಿಂದ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಹಕ್ಕು ಪತ್ರ ನೀಡದಿರುವುದು ಸರಿಯಲ್ಲ. ಯಾವುದೇ ರೀತಿಯ ಸಮಸ್ಯೆಗಳು ಇದ್ದರೂ ಸಹ ಬಗೆಹರಿಸಿಕೊಂಡು ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲು ಮುಂದಾಗಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ. ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕ್ಷೇತ್ರದಲ್ಲಿರುವ ಅರ್ಹ ಫಲಾನುಭವಿಗಳಿಗೆ ಮೊದಲು ಹಕ್ಕು ಪತ್ರ ನೀಡಿ. ಎಲ್ಲದಕ್ಕೂ ಅರಣ್ಯ ಇಲಾಖೆ ನೆಪಮಾಡಿ ಹಕ್ಕು ಪತ್ರ ನೀಡದೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಅರಣ್ಯ ಇಲಾಖೆಯವರು ಮನೆ ಕಟ್ಟಿಕೊಳ್ಳುವಾಗ ಸುಮ್ಮನಿರುತ್ತಾರೆ. ಜಾಗಕ್ಕೆ ಎನ್‌ಒಸಿ ಕೊಡುವಾಗ ಜಾಗ ನಮ್ಮದು ಎಂದು ತಕರಾರು ಮಾಡುತ್ತಾರೆ. ಫಲಾನುಭವಿಗಳಿಗೆ ಹಕ್ಕುಪತ್ರ ಕೊಡುವ ಸಂದರ್ಭದಲ್ಲಿ ಈ ರೀತಿ ಮಾಡಿದರೆ ಆ ಕುಟುಂಬ ಎಲ್ಲಿಗೆ ಹೋಗಬೇಕು. ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಎಫ್‌ಓ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಲು ದಿನಾಂಕ ನಿಗದಿಪಡಿಸಿ ಮುಂದಿನ ೧೫ ದಿನದೊಳಗಾಗಿ ಹಕ್ಕುಪತ್ರ ನೀಡಲು ಸಿದ್ದತೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಸೂಚಿಸಿದರು. ಸಭೆಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಸಾಕಷ್ಟು ದೂರು ಕೇಳಿ ಬಂದವು. ಅಂಗಡಿ ಮಾಲೀಕರು ತಿಂಗಳಿಗೆ ೩ ದಿನ ಮಾತ್ರ ಬಾಗಿಲು ತೆಗೆಯುವುದನ್ನು ಬಿಟ್ಟು ತಿಂಗಳ ಪೂರ್ತಿ ಬಾಗಿಲು ತೆಗೆದು ಪಡಿತರ ನೀಡಬೇಕು. ತಿಂಗಳ ಪೂರ್ತಿ ಬಾಗಿಲು ತೆರೆಯದ ಅಂಗಡಿಗಳಿಗೆ ನೋಟೀಸು ನೀಡಿ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ತಾಪಂ ಇಒ ಆಶಾಲತಾ, ಪಡಿತರ ಚೀಟಿ ತಿದ್ದುಪಡಿ ಕುರಿತಂತೆ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಒಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ಗಾಡಿ ಮೂಲಕ ಸಾರ್ವಜನಿಕರಿಗೆ ಮಾಹಿತಿ ಮುಟ್ಟಿಸಬೇಕು. ಅಲ್ಲದೆ ಹತ್ತಿರದ ಗ್ರಾಮ ಒನ್, ಸೈಬರ್ ಸೆಂಟರ್‌ಗಳಲ್ಲಿ ಹಾಗೂ ಪಡಿತರ ವಿತರಕರ ಅಂಗಡಿಗಳಲ್ಲಿಯೂ ನಾಮಫಲಕ ಹಾಕುವಂತೆ ಸೂಚಿಸಬೇಕೆಂದರು. ತಹಸೀಲ್ದಾರ್ ಪರುಸಪ್ಪ ಕುರುಬರ ಸಭೆಯಲ್ಲಿ ಮಾಹಿತಿ ನೀಡಿ, ೯೪ ಸಿ ಅಡಿಯಲ್ಲಿ ಹಕ್ಕುಪತ್ರಕ್ಕಾಗಿ ೪೦೨೪ ಅರ್ಜಿಗಳು ಬಂದಿದ್ದು, ಈ ಪೈಕಿ ೨೪೪೮ ಮನೆಗಳ ಹಕ್ಕುಪತ್ರ ಸಿದ್ದವಾಗಿವೆ. ಹಲವು ಕಾರಣಗಳಿಂದಾಗಿ ೧೫೩೯ ಅರ್ಜಿಗಳು ತಿರಸ್ಕೃತಗೊಂಡಿವೆ. ಅಂತಹವರಿಗೆ ಕಾರಣ ಹೇಳಿ ಹಿಂಬರಹ ಕೊಡಲಾಗಿದೆ ಎಂದರು.ಆಹಾರ ಇಲಾಖೆ ಅಧಿಕಾರಿ ಎ.ಟಿ ಬಸವರಾಜ್, ಎಪಿಎಲ್ ಪಡಿತರ ಚೀಟಿಯಾಗಿ ಪರಿವರ್ತಿಸಲಾದ ಕಾರ್ಡ್‌ಗಳ ಸಂಖ್ಯೆ ೧೪೦೦, ಬಿಪಿಎಲ್ ಪಡಿತರ ಚೀಟಿಯಾಗಿ ಪರಿವರ್ತಿಸಲಾದ ಕಾರ್ಡ್‌ಗಳ ಸಂಖ್ಯೆ ೧೭೧, ಬಾಕಿ ಇರುವ ಅರ್ಜಿ ೮೯ ಎಂದರು.ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಹನುಮಾನಾಯ್ಕ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಅಧಿಕಾರಿ ಉಪೇಂದ್ರ, ಕೆಡಿಪಿ ಸದಸ್ಯರಾದ ಮಂಜಪ್ಪ, ರಮೇಶ್, ರಾಜೇಂದ್ರ, ಜಯಲಕ್ಷ್ಮಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಸಭೆಯಲ್ಲಿ ಮೆಸ್ಕಾಂ, ಅಬಕಾರಿ ಇಲಾಖೆ, ಕೃಷಿ, ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಡಿ೨೦-ಬಿಡಿವಿಟಿ೩ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ೧ನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರವಾಡ ಮಹಾನಗರ ಪಾಲಿಕೆ ನಾಮಫಲಕ ಅಳವಡಿಕೆ!
ಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ: ಪುರುಷೋತ್ತಮಾನಂದಪುರಿ ಶ್ರೀ