ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಆಗದಿರಲಿ: ಎಂಟಿಬಿ

KannadaprabhaNewsNetwork |  
Published : Dec 06, 2024, 08:56 AM IST
ಫೋಟೋ : 5 ಹೆಚ್‌ಎಸ್‌ಕೆ 1 ಮತ್ತು 2 1: ಗರುಡಾಚಾರ್ ಪಾಳ್ಯದ  ಜ್ಞಾನ ಜ್ಯೋತಿ ವಿದ್ಯಾನಿಕೇತನ ಶಾಲೆಯಲ್ಲಿ ಎಂಟಿಬಿ ಅನಂತ ಉನ್ನತಿ ಎಜುಕೇಶನಲ್ ಟ್ರಸ್ಟ್ ಹಾಗೂ ಕಾಳಿದಾಸ ಹೆಲ್ತ್ ಅಂಡ್ ಎಜುಕೇಶನಲ್ ಟ್ರಸ್ಟ್ ವತಿಯಿಂದ 90 ಮೆಡಿಕಲ್ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ನೋಟ್ ಬುಕ್ ಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಶಿಕ್ಷಣ ಎನ್ನುವುದು ವ್ಯಾಪಾರಿಕರಣ ಆಗಿದ್ದು ವೈದ್ಯಕೀಯ ವೃತ್ತಿಗೆ ತನ್ನದೇ ಆದ ಮೌಲ್ಯ ಇದೆ. ಅದು ವ್ಯಾಪಾರಿಕರಣಕ್ಕೆ ಸೀಮಿತವಾಗದೆ ಮಾನವೀಯ ನೆಲಗಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಶಿಕ್ಷಣ ಎನ್ನುವುದು ವ್ಯಾಪಾರಿಕರಣ ಆಗಿದ್ದು ವೈದ್ಯಕೀಯ ವೃತ್ತಿಗೆ ತನ್ನದೇ ಆದ ಮೌಲ್ಯ ಇದೆ. ಅದು ವ್ಯಾಪಾರಿಕರಣಕ್ಕೆ ಸೀಮಿತವಾಗದೆ ಮಾನವೀಯ ನೆಲಗಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಗರುಡಾಚಾರ್ ಪಾಳ್ಯದ ಜ್ಞಾನಜ್ಯೋತಿ ವಿದ್ಯಾನಿಕೇತನ ಶಾಲೆಯಲ್ಲಿ ಎಂಟಿಬಿ ಅನಂತ ಉನ್ನತಿ ಎಜುಕೇಶನಲ್ ಟ್ರಸ್ಟ್ ಹಾಗೂ ಕಾಳಿದಾಸ ಹೆಲ್ತ್ ಅಂಡ್ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 90 ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ನೋಟ್‌ ಬುಕ್‌ ವಿತರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಪಡೆಯಲು ಹಲವಾರು ರೀತಿಯಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದಾರೆ. ಪ್ರಸ್ತುತ ಸಮಾಜದಲ್ಲಿ ಗುಣಾತ್ಮಕ ಶಿಕ್ಷಣ ದಕ್ಕುವುದು ಕೂಡ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ನಮ್ಮ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿ ವರ್ಷ ವಿದ್ಯಾರ್ಥಿ ವೇತನ ನೀಡುತ್ತಿದ್ದೇವೆ. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು, ಭವಿಷ್ಯದಲ್ಲಿ ವೈದ್ಯಕೀಯ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಬೇಕು. ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕ್ಷೇತ್ರ ವ್ಯಾಪಾರೀಕರಣವಾಗುತ್ತಿದೆ. ಆದ್ದರಿಂದ ಸಾರ್ವಜನಿಕರ ಕೈಗೆಟುವ ರೀತಿಯ ವೈದ್ಯಕೀಯ ಸೇವೆ ನೀಡುವಂತಾಗಬೇಕು ಎಂದು ಹೇಳಿದರು.

ಟ್ರಸ್ಟಿನ ಕಾರ್ಯದರ್ಶಿ ಎಂಟಿಬಿ ರಾಜೇಶ್ ಮಾತನಾಡಿ, ಸುಮಾರು ಏಳು ವರ್ಷಗಳಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ರೂಪಿಸಿದ್ದು ವಿದ್ಯಾರ್ಥಿಗಳು ಇದನ್ನ ಸದುಪಯೋಗಪಡಿಸಿಕೊಂಡು ಸಮಾಜದ ಉನ್ನತಿಗೆ ಮುಂದಾಗಬೇಕು. ಆಗ ಮಾತ್ರ ನಮ್ಮ ಈ ಸಾಮಾಜಿಕ ಸೇವಾ ಕಾರ್ಯಕ್ಕೆ ಬೆಲೆ ಸಿಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿನ ಖಜಾಂಚಿ ಶಾಂತಕುಮಾರಿ, ಕಾರ್ಯದರ್ಶಿ ಎಂಟಿಬಿ ರಾಜೇಶ್, ಸಮಾಜ ಸೇವಕರಾದ ಕುಂಬೇನ ಅಗ್ರಹಾರ ಮುನಿರಾಜು, ಚಿಕ್ಕಣ್ಣ ಸುಬ್ರಮಣಿ, ಕಾಳಿದಾಸ ಹೆಲ್ತ್ ಅಂಡ್ ಎಜುಕೇಶನಲ್ ಟ್ರಸ್ಟ್‌ನ ಡಾ.ಪರಮೇಶ್ ಮತ್ತು ಡಾ.ವಿಜಯಲಕ್ಷ್ಮಿ ಪರಮೇಶ್ ಉಪಸ್ಥಿತರಿದ್ದರು.

ಫೋಟೋ : 5 ಹೆಚ್‌ಎಸ್‌ಕೆ 1 ಮತ್ತು 2

ಹೊಸಕೋಟೆ ತಾಲೂಕಿನ ಗರುಡಾಚಾರ್ ಪಾಳ್ಯದ ಜ್ಞಾನ ಜ್ಯೋತಿ ವಿದ್ಯಾನಿಕೇತನ ಶಾಲೆಯಲ್ಲಿ ಎಂಟಿಬಿ ಅನಂತ ಉನ್ನತಿ ಎಜುಕೇಶನಲ್ ಟ್ರಸ್ಟ್ ಹಾಗೂ ಕಾಳಿದಾಸ ಹೆಲ್ತ್ ಅಂಡ್ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ನೋಟ್ ಬುಕ್ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!