ಕನ್ನಡಪ್ರಭ ವಾರ್ತೆ ಹುಳಿಯಾರು
ಮಾರ್ಚ್ 14 ರಂದು ವಿದ್ಯಾರ್ಥಿನಿಯರ ಶೌಚಾಲಯದ ಮೇಲೆ ಕಲ್ಲು ಎಸೆಯುವುದನ್ನು ಪ್ರಶ್ನೆ ಮಾಡಿದ ಶಾಲಾ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಶಾಲಾ ಕ್ಯಾಂಪಸ್ ನ ಒಳಗಡೆಯೇ ಹಲ್ಲೆ ಮಾಡಲಾಗಿದೆ. ಜೊತೆಗೆ ಶಿಕ್ಷಕರ ಮುಂದೆಯೇ ಮಾರಕಾಸ್ತ್ರಗಳನ್ನು ಝಳಪಿಸಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಗೃಹ ಇಲಾಖೆ ಕಾನೂನು ಕ್ರಮ ಜರುಗಿಸಬೇಕೆಂದು ಎಬಿವಿಪಿ ಆಗ್ರಹಿಸಿದರು.
ಹುಳಿಯಾರು ಅತ್ಯಂತ ಶಾಂತಿಯುತ ನಗರ. ಇಂತಹ ಪಟ್ಟಣದಲ್ಲಿ ಈ ರೀತಿಯ ಅಮಾನವೀಯ ಘಟನೆ ಬೆಳಕಿಗೆ ಬಂದಿರುವುದು ನಾಗರಿಕ ಸಮುದಾಯ ತಲೆತಗ್ಗಿಸುವಂತೆ ಮಾಡಿದೆ. ಶಾಲಾ ಕಾಲೇಜುಗಳ ಸುತ್ತಮುತ್ತ ಸಿಸಿಟಿವಿ ಅಳವಡಿಸಬೇಕು ಹಾಗೂ ಪೊಲೀಸ್ ಬೀಟ್ ಹಾಕುವುದರ ಮೂಲಕ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕೆಂದು ಎಬಿವಿಪಿ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ದಕ್ಷಿಣ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ವಿಭಾಗ್ ಸಂಚಾಲಕ್ ಪ್ರಾಂತ ಸಹಕಾರ್ಯದರ್ಶಿ ಎಚ್.ಆರ್ ಗುರುಪ್ರಸಾದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುನೀಲ್,ಕಾರ್ಯಕರ್ತರಾದ ದರ್ಶನ್, ಕಿರಣ್ ಗೌಡ, ಗೋವಿಂದರಾಜು, ಶರತ್, ವಿಶ್ವಾಸ್ ಸೇರಿದಂತೆ ಮತ್ತಿತರರು ಇದ್ದರು.