ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಆರ್ ಟಿಒ ಬಳಿ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದಿಂದ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು. ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು. ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ.ಕೆ.ಬಿ. ಲಿಂಗರಾಜು ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ. 98 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ಅವರ ಸೇವೆ ಮತ್ತು ಪರಿಸರ ಕಾಳಜಿಯನ್ನು ರಾಜ್ಯ ಸರ್ಕಾರ ಅಳವಡಿಸಿ, ಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.