ಕ್ಯಾನ್ಸರ್ ತಪಾಸಣೆಗೆ ಹಿಂಜರಿಕೆ ಬೇಡ

KannadaprabhaNewsNetwork |  
Published : Feb 05, 2025, 12:30 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ  | Kannada Prabha

ಸಾರಾಂಶ

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಹಮ್ಮಿಕೊಳ್ಲಲಾದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಡಾ.ಕಂಬಾಳಿ ಮಠ್ ಚಾಲನೆ ನೀಡಿದರು.

ಮಾ್ಹಿತಿ ಶಿಕ್ಷಣದಲ್ಲಿ ಎನ್‍ಸಿಡಿ ಕನ್ಸಲ್ಟ್ ಟೆಂಟ್ ಡಾ.ಶ್ವೇತಾಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಹಿಂಜರಿಕೆ, ಕೀಳರಿಮೆ, ಸಂಕೋಚ ಬಿಟ್ಟು ಕ್ಯಾನ್ಸರ್ ರೋಗದ ತಪಾಸಣೆ ಮಾಡಿಸಿಕೊಳ್ಳಿ ಎಂದು ಜಿಲ್ಲಾ ಎನ್‍ಸಿಡಿ ಕನ್ಸ್‍ಲ್ಟೆಂಟ್ ಡಾ.ಶ್ವೇತಾ ಹೇಳಿದರು.

ಇಲ್ಲಿನ ಮುರುಘ ರಾಜೇಂದ್ರ ನಗರ ಬಿಸಿಎಂ ಹಾಸ್ಟೆಲ್ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಹಮ್ಮಿಕೊಳ್ಲಲಾದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರಲ್ಲಿ ಇಂದಿಗೂ ಸಹ ಆತಂಕ ಮತ್ತು ಭಯಕ್ಕೆ ಕಾರಣವಾಗುವ ಅತಿ ದೊಡ್ಡ ಮತ್ತು ಹೆಚ್ಚುತ್ತಿರುವ ರೋಗಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಸ್ತನದ ಕ್ಯಾನ್ಸರ್, ಗರ್ಭಕಂಠ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ಪ್ರಮುಖವಾಗಿ ಭಾರತದಲ್ಲಿ ಆರೋಗ್ಯ ಸಮಸ್ಯೆಗಳಾಗಿವೆ. ಕಾಲ ಕಾಲಕ್ಕೆ ತಪಾಸಣೆ ಸ್ವಯಂ ಪರೀಕ್ಷೆ ಮಾಡಿಕೊಳ್ಳುವುದು, ಪೌಷ್ಟಿಕ ಆಹಾರ ಸೇವನೆ, ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದರಿಂದ ನಾವು ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಬಹುದು ಎಂದರು.

ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಚಂದ್ರಶೇಖರ್ ಕಂಬಾಳಿ ಮಠ ಮಾತನಾಡಿ, ಮಾರ್ಚ್ 1ರಿಂದ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಪ್ರತಿ ದಿನ 30 ಮನೆಗಳನ್ನ ನಿಗದಿಗೊಳಿಸಿಕೊಂಡು 30 ವರ್ಷ ಮೇಲ್ಪಟ್ಟ ಕುಟುಂಬದ ಎಲ್ಲಾ ಸದಸ್ಯರಿಗೂ ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ ಪರೀಕ್ಷೆಗಳು ತಪಾಸಣೆ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಾರೆ ಎಂದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಬಿಸಿಎಂ ವಸತಿ ನಿಲಯ ನಿಲಯ ಪಾಲಕ ಆನಂದ್ ರಾಜ್, ಸಮುದಾಯ ಆರೋಗ್ಯ ಅಧಿಕಾರಿ ಜಯಲತಾ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಶಿಲ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ್, ರಾಷ್ಟ್ರೀಯ ಬಾಲ್ಯಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ.ಮಹೇಂದ್ರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!