ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆ ನೀರಿನಲ್ಲಿ ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ
ಕೊಪ್ಪಳ: ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷ ಮಾಡಬೇಡಿ, ಮಲೇರಿಯಾ ಅಂತ್ಯಗೊಳಿಸಲು ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ ಹೇಳಿದರು.
ನಗರದ ಕುವೆಂಪು ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ,ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜರುಗಿದ ಮಲೇರಿಯಾ ವಿರೋಧಿ ಮಾಸಾಚರಣೆ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಇದರ ಉದ್ದೇಶ ಜೂನ್ ತಿಂಗಳಲ್ಲಿ ಮಳೆಗಾಲ ಪ್ರಾರಂಭವಾಗುವುದರಿಂದ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆ ಹೆಚ್ಚಾಗಿ ಮನುಷ್ಯರಿಗೆ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ.ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮ ಆಚರಿಸಲಾಗುತ್ತದೆ. ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆ ನೀರಿನಲ್ಲಿ ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ಮೊಟ್ಟೆಗಳ ಬೆಳವಣಿಗೆಗಾಗಿ ಮನುಷ್ಯನಿಗೆ ಕಚ್ಚುವುದರಿಂದ ಕಾಯಿಲೆ ಹರಡುತ್ತದೆ. ಈ ರೋಗದ ಲಕ್ಷಣ ತಲೆನೋವು, ವಾಂತಿ, ವಿಪರೀತ ಚಳಿಜ್ವರ, ಮೈನಡಕ ಲಕ್ಷಣಗಳಿದ್ದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಆರೋಗ್ಯ ಸಿಬ್ಬಂದಿಗಳ ಜತೆ ರಕ್ತ ಪರೀಕ್ಷೆ ಮಾಡಿಸಿ ಖಚಿತ ಪಟ್ಟರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಜ್ವರದ ಬಗ್ಗೆ ನಿರ್ಲಕ್ಷ ಮಾಡಬಾರದೆಂದು ತಿಳಿಸಿದರು.
ಮಲೇರಿಯಾ ಅಂತ್ಯಗೊಳಿಸಲು ಸಂಕಲ್ಪ ಮಾಡೋಣ: ನಮಗಿದು ಸಾಧ್ಯವಿದೆ,ನಾವು ಇದನ್ನು ಮಾಡಲೇಬೇಕು ಎಂಬ ಈ ವರ್ಷದ ಘೋಷ್ಯವಾಕ್ಯದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಇದರ ನಿಯಂತ್ರಣಕ್ಕಾಗಿ ತಮ್ಮ ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಂಜೆ ವೇಳೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಮನೆಯಲ್ಲಿ ನೀರು ಶೇಖರಣ ತೋಟ್ಟಿಗಳಲ್ಲಿ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಭಿವೃದ್ಧಿ ಮಾಡುತ್ತವೆ. ಲಾರ್ವಾ ನಾಶಕ್ಕಾಗಿ ಸ್ವಚ್ಛಗೊಳಿಸುತ್ತಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮನೆ ಭೇಟಿ ನೀಡಿದಾಗ ಸಹಕರಿಸಿ ರಕ್ತಲೇಪನ ನೀಡಿ, ಡೆಂಘೀ ಖಾಯಿಲೆ ತಡೆಗಟ್ಟುವ ಸಲುವಾಗಿ ಈಡಿಸ್ ಸೊಳ್ಳೆ ಉತ್ಪತ್ತಿ ರಹೀತ ಶಾಲಾ ಆವರಣ ಮಾಡುವುದು ಅವಶ್ಯವಾಗಿರುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಯಯೆಹೆಚ್.ಎಂ.ಹನುಮಂತಪ್ಪ ತಳವಾರ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂತಹ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ.ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಗ್ರಾಮಗಳಲ್ಲಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹೇಳಿದರು.
ಸಹ ಶಿಕ್ಷಕಿ ಮಂಜುಳಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅನಿತಾ, ನೌಶಾದಬೇಗಂ, ಪೂರ್ಣಿಮಾ, ಸಹ ಶಿಕ್ಷಕರು ಆಶಾಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.