ಕನ್ನಡಪ್ರಭ ವಾರ್ತೆ ಕೋಟ
ಪಾಂಡೇಶ್ವರ ಯಡಬೆಟ್ಟು ಹಿರಿಯ ಕೃಷಿಕ ರಾಮಕೃಷ್ಣ ಐತಾಳ್ ಇವರಿಗೆ ಪಂಚವರ್ಣ ರೈತ ಪುರಸ್ಕಾರ ನೀಡಿ ಗೌರವಿಸಲಾಯಿತು.ವಿಶೇಷವಾಗಿ ಗಿಡ ನಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು.ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು.
ಸಾಸ್ತಾನ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗೋವಿಂದ ಪೂಜಾರಿ ಅಭಿನಂದನಾ ನುಡಿಗಳನ್ನಾಡಿದರು. ಅಭ್ಯಾಗತರಾಗಿ ಪಾಂಡೇಶ್ವರ ಪಂಚಾಯಿತಿ ಸದಸ್ಯೆ ಕಲ್ಪನಾ ದಿನಕರ್, ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಸ್ನೇಹಕೂಟ ಸಂಚಾಲಕಿ ಭಾರತಿ ವಿ ಮಯ್ಯ, ರೋಟರಿ ಕ್ಲಬ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷ ಲಲಿತಾ ಪೂಜಾರಿ ಉಪಸ್ಥಿತರಿದ್ದರು.ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಪಂಚವರ್ಣದ ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವಿಕವಾಗಿ ನುಡಿಗಳನ್ನಾಡಿದರು. ಸಂಚಾಲಕಿ ಸುಜಾತ ಎಂ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು.