ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

KannadaprabhaNewsNetwork |  
Published : Mar 21, 2024, 01:05 AM IST
ತುಮಕೂರು ವಿಶ್ವವಿದ್ಯಾನಿಲಯ ಬುಧವಾರ ಆಯೋಜಿಸಿದ್ದ 21 ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು, ಪ್ರೊ.ಪ್ರಸನ್ನಕುಮಾರ್‌ ಕೆ.,ಪ್ರೊ. ಬಿ. ಶೇಖರ್, ಪ್ರೊ.ಮನೋಹರ್ ಶಿಂಧೆ, ಡಾ. ಎ. ಎಂ. ಮಂಜುನಾಥ್‌ ಇದ್ದಾರೆ | Kannada Prabha

ಸಾರಾಂಶ

ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯ ಬುಧವಾರ ಆಯೋಜಿಸಿದ್ದ 21ನೆಯ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಮಾನ ಮನಸ್ಕ ರಿಂದ ಗುಣಮಟ್ಟದ ವಿಶ್ವವಿದ್ಯಾನಿಲಯವನ್ನು ಕಟ್ಟಲು ಸಾಧ್ಯ. ಬೋಧಕ-ಬೋಧಕೇತರ ಸಿಬ್ಬಂದಿ ಸಹಭಾಗಿತ್ವ ವಿವಿಗಳನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದರು.

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಶಿಕ್ಷಕನಿಂದ ಶಿಕ್ಷಣಕ್ಕೊಂದು ಅರ್ಥ ಬರುತ್ತದೆ. ವಿವಿಗಳು ಸಂಶೋಧನಾಧಾರಿತ ಶಿಕ್ಷಣಕ್ಕೆ ಒತ್ತುಕೊಡಬೇಕು. ವಿವಿಯು ನ್ಯಾಕ್ ಮಾನ್ಯತೆಯಲ್ಲಿ ‘ಎ+’ ಶ್ರೇಣಿ ಗಳಿಸಿದರೆ ಅನುದೀನ ಯತೇಚ್ಛವಾಗಿ ಸಿಗಲಿದೆ.ಇವೆಲ್ಲ ಸಾಧನೆಗೂ ಪ್ರಾಧ್ಯಾಪಕರ ನಡುವೆ ಗುಣಮಟ್ಟ ಸಂಬಂಧವಿರಬೇಕು. ಸಕಾರಾತ್ಮಕ ವಿಷಯಗಳನ್ನು ಸ್ವೀಕರಿಸುವ ಮನೋಭಾವವಿರಬೇಕು ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಬಿಸಿ ಊಟದ ಯೋಜನೆಯಿಂದಾಗಿ ಶೇ.47ರಷ್ಟಿದ್ದ ವಿವಿ ಫಲಿತಾಂಶ ಶೇ.51ಕ್ಕೆ ಏರಿಕೆಯಾಗಿದೆ. ಈ ಯೋಜನೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಹೆಚ್ಚು ಗಮನಹರಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್ ಮಾತನಾಡಿ, ವಿವಿಯ ಬಿಸಿ ಊಟದ ಯೋಜನೆಯಿಂದ ಗ್ರಾಮೀಣ ಭಾಗದ 1500 ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇದರ ಸಕಾರಾತ್ಮಕ ಪರಿಣಾಮ ಶಿಕ್ಷಣದ ಮೇಲೆ ಆಗಲಿದೆ ಎಂದರು.

ವಿವಿ ವಾಣಿಜ್ಯ ನಿಕಾಯದ ಡೀನ್ ಪ್ರೊ.ಬಿ.ಶೇಖರ್, ವಿಜ್ಞಾನ ನಿಕಾಯದಡೀನ್ ಪ್ರೊ.ಮನೋಹರ್ ಶಿಂಧೆ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಕಾಶ್ ಎಂ.ಶೇಟ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಸಹಾಯಕ ಪ್ರಾಧ್ಯಾಪಕಿ ಡಾ.ಬಿ.ಎನ್.ಹೇಮಾವತಿ, ಡಾ.ಜ್ಯೋತಿ ಮತ್ತು ಬೋಧಕೇತರ ಸಿಬ್ಬಂದಿ ಲಕ್ಮೀಪತಿ, ಇಲ್ಲಿಯವರೆಗಿನ ತುಮಕೂರು ವಿವಿಯ ಕುಲಪತಿಗಳ, ಕುಲಸಚಿವರ ಕಾರ್ಯಗಳನ್ನು ಸ್ಮರಿಸಿದರು.

ಸಂಸ್ಥಾಪನಾ ದಿನಾಚರಣೆ ಸಮಿತಿ ಸಂಚಾಲಕ ಡಾ. ಎ. ಎಂ. ಮಂಜುನಾಥ್ ಉಪಸ್ಥಿತರಿದ್ದರು.ಪ್ರಾಧ್ಯಾಪಕ ಪ್ರೊ. ಬಿ. ರಮೇಶ್ ಸ್ವಾಗತಿಸಿದರು.ಪ್ರೊ. ಬಿ. ಟಿ. ಸಂಪತ್‌ಕುಮಾರ್ ವಂದಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ