ಮಾನಸಿಕ ಸ್ಥಿಮಿತ ಕಳೆದುಕೊಳ್ಳದಿರಿ

KannadaprabhaNewsNetwork |  
Published : Nov 01, 2025, 02:30 AM IST
೩೧ ವೈಎಲ್‌ಬಿ ೦೧ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪದವಿ ಪೂರ್ವ (ಪ್ರೌಢ ವಿಭಾಗ) ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಹಾಗೂ ಡ್ರಗ್ಸ್ ಮುಕ್ತ ಭಾರತಕ್ಕಾಗಿ ಡ್ರಗ್ಸ್ ಜಾಗೃತಿ ಕುರಿತು ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ನಡೆಯಿತು.================= | Kannada Prabha

ಸಾರಾಂಶ

ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಶಕ್ತಿ ಹೊಂದಲು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು

ಯಲಬುರ್ಗಾ: ಒತ್ತಡದ ಬದುಕಿನಲ್ಲಿ ಮಾನವ ಮಾನಸಿಕ ಸ್ಥಿಮಿತ ಕಳೆದುಕೊಳ್ಳದಿರಲಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಹೇಳಿದರು.

ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಸರ್ಕಾರಿ ಪದವಿ ಪೂರ್ವ (ಪ್ರೌಢ ವಿಭಾಗ) ಕಾಲೇಜಿನಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಹಾಗೂ ಡ್ರಗ್ಸ್ ಮುಕ್ತ ಭಾರತಕ್ಕಾಗಿ ಡ್ರಗ್ಸ್ ಜಾಗೃತಿ ಕುರಿತು ಹಮ್ಮಿಕೊಂಡಿದ್ದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಶಕ್ತಿ ಹೊಂದಲು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು. ಯುವಕರು ದುಶ್ಚಟಗಳಿಗೆ ಅಂಟಿಕೊಳ್ಳದೆ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುವ ಮಾದಕ ವಸ್ತುಗಳಿಂದ ದೂರವಿರಬೇಕು‌. ಎಲ್ಲರೂ ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು. ಯಾರೂ ಕೂಡ ಅಪರಾಧಿಕ ಚಟುವಟಿಕೆಗಳಲ್ಲಿ ತೊಡಗದೆ ಒಳ್ಳೆಯ ನಾಗರಿಕರಾಗಿ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ವೈದ್ಯ ಶಿವಕುಮಾರ ರಾಠೋಡ ಮಾತನಾಡಿ, ಡ್ರಗ್ಸ್ ಉಪಯೋಗದಿಂದ ಶಾರೀರಿಕವಾಗಿ ದುಷ್ಪರಿಣಾಮ ಬೀರುತ್ತದೆ. ಇದರಿಂದ ಮಾನಸಿಕ ಆರೋಗ್ಯದ ಮೇಲೆ ಹಾನಿಯಾಗುತ್ತದೆ ಎಂದರು.

ವಕೀಲರ ಸಂಘದ ತಾಲೂಕಾಧ್ಯಕ್ಷ ಎಸ್.ಎಸ್. ಹೊಂಬಳ, ಸರ್ಕಾರಿ ಅಭಿಯೋಜಕ ರವಿ ಹುಣಿಸಿಮರದ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಪಾಟೀಲ್, ವಕೀಲ ಮಾನಶೆಟ್ಟರ್, ಪ್ರಾಚಾರ್ಯ ಜಿಲಾನ್.ಡಿ.ಎಸ್, ಉಪಪ್ರಾಚಾರ್ಯ ಬಾಬುಸಾಬ್ ಲೈನದಾರ್, ಶಿಕ್ಷಕ ದೇವೇಂದ್ರ ಜಿರ್ಲಿ, ಸುಭಾಷ, ಮೌನೇಶ, ಶಿರಸ್ತೇದಾರ ಲೋಕೇಶ, ನ್ಯಾಯಾಲಯ ಸಿಬ್ಬಂದಿ ರಾಘವೇಂದ್ರ, ವಿನಾಯಕ ಸೇರಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಬೀದಿ ನಾಯಿಗಳು ಶೀಘ್ರ ಶೆಲ್ಟರ್‌ಗೆ : ರಾವ್‌
ಸಿದ್ದು ಅಹಿಂದ ಲೀಡರ್‌ ಆಗಿದ್ದರೆ ಪುತ್ರ ಕ್ಷೇತ್ರ ಆಯ್ಕೆ ಏಕೆ?: ಗೌಡ