ಯುವಜನರು ಪತ್ರಿಕೆ, ಪುಸ್ತಕಗಳಿಂದ ದೂರ ಸರಿಯದೇ, ಇವುಗಳನ್ನು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಆರ್. ಹನುಮಂತಪ್ಪ ಹೇಳಿದ್ದಾರೆ.
ಯುವಜನರು ಪತ್ರಿಕೆ, ಪುಸ್ತಕಗಳಿಂದ ದೂರ ಸರಿಯದೇ, ಇವುಗಳನ್ನು ಪ್ರತಿನಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಆರ್. ಹನುಮಂತಪ್ಪ ಹೇಳಿದರು.
ಪಟ್ಟಣದ ಪವಿತ್ರ ಕ್ಷೇತ್ರ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಧರ್ಮ,ದೇವರು, ಮತ್ತು ದೇವಾಲಯಗಳು, ಹಾಗೂ ವಿವಾಹ ಸಂಪ್ರದಾಯಗಳು ಎಂಬ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಯುವಜನತೆ ಪುಸ್ತಕಗಳ ಓದುವಿಕೆಯಿಂದ ದೂರಸರಿದು, ಕೇವಲ ಮೊಬೈಲ್, ವ್ಯಾಟ್ಸಪ್ ಹಾಗೂ ಫೇಸ್ ಬುಕ್‌ಗಳಲ್ಲಿಯೇ ಹೆಚ್ಚು ಸಮಯ ಕೆಳೆಯುತ್ತಿದ್ದಾರೆ. ಓದು, ಆಟಪಾಠಗಳಂತಹ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಪೋಷಕರು ಮಕ್ಕಳಲ್ಲಿ ಬಾಲ್ಯದಿಂದಲೇ ಓದುವ ಹವ್ಯಾಸ ಬೆಳೆಸಬೇಕು. ಜ್ಞಾನವರ್ಧಕ ಪುಸ್ತಕಗಳ ಓದು ವ್ಯಕ್ತಿತ್ವ ವಿಕಸನಕ್ಕೆ ತುಂಬಾ ಸಹಕಾರಿಯಾಗುತ್ತದೆ. ಪ್ರತಿಯೊಬ್ಬರೂ ತಂದೆ, ತಾಯಿ, ಗುರುಗಳು ಹಾಗೂ ಸಮಾಜದ ಋಣವನ್ನು ತೀರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ಮೌಲ್ಯಗಳುಳ್ಳ ಸಮಾಜ ನಿರ್ಮಾಣಕ್ಕೆ ಸಾಹಿತ್ಯ ಮತ್ತು ಗ್ರಂಥಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಆಶೀರ್ವಚನ ನೀಡಿದರು. ಸಾಹಿತಿ ಯು.ಎನ್. ಸಂಗನಾಳ ಮಠ, ಮಲೇಬೆನ್ನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಗೊಲ್ಲರಹಳ್ಳಿ ಮಂಜುನಾಥ ಮಾತನಾಡಿದರು.
ಕ.ಸಾ.ಪ. ಮಾಜಿ ಅಧ್ಯಕ್ಷ ಎಂ.ಎಸ್. ರೇವಣಪ್ಪ, ಅರಬಗಟ್ಟೆ ಕಾಲೇಜಿನ ಪ್ರಾಂಶುಪಾಲ ಜಿ.ಎಸ್. ಚಂದ್ರೇಗೌಡ, ಹೊನ್ನಾಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಬಸವರಾಜ ಬೋವಿ, ಯುವಚಿಂತಕ ಮನು ದುಮ್ಮಿ, ಅನ್ನದಾನಯ್ಯ, ಶಾಸ್ತ್ರಿ, ನಿಜಗುಣ ಶಿವಯೋಗಿ ಸ್ವಾಮಿ ಅನೇಕರು ಇದ್ದರು.
- - -
-18ಎಚ್.ಎಲ್.ಐ2:
ಹೊನ್ನಾಳಿ ಪಟ್ಟಣದ ಹಿರೇಕಲ್ಮಠದಲ್ಲಿ ನಡೆದ ಧರ್ಮ ಸಭೆಯಲ್ಲಿ ನಿವೃತ್ತ ಉಪನ್ಯಾಸಕ ಎಸ್.ಆರ್. ಹನುಮಂತಪ್ಪ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಲಾಯಿತು. ಹಿರೇಕಲ್ಮಠ ಸ್ವಾಮೀಜಿ, ಇನ್ನಿತರ ಗಣ್ಯರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.