ಪರಿಷತ್ ಚುನಾವಣೆ ಹಗುರವಾಗಿ ಪರಿಗಣಿಸಬೇಡಿ-ಶಾಸಕ ಶಿವಣ್ಣನವರ

KannadaprabhaNewsNetwork |  
Published : Sep 29, 2026, 02:15 AM IST
ಪಶ್ವಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಡಗಿ ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಭೆ ಜರುಗಿತು. | Kannada Prabha

ಸಾರಾಂಶ

ಕಾಂಗ್ರೆಸ್ ಪಕ್ಷವು ಐತಿಹಾಸಿಕ ಜಯ ದಾಖಲಿಸುವ ಮೂಲಕ ಜನರಿಗೆ ಉತ್ತಮ ಆಡಳಿತ ನೀಡಿದೆ. ಪರಿಷತ್ ಚುನಾವಣೆ ಹಗುರವಾಗಿ ಪರಿಗಣಿಸದೇ ಆಡಳಿತಕ್ಕೆ ಸಿಕ್ಕ ಮರು-ಮೌಲ್ಯಮಾಪನ ಅಥವಾ ಜನಾದೇಶದಂತೆ ಅಭ್ಯರ್ಥಿ ಗೆಲ್ಲಿಸಲು ಶ್ರಮಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕರ್ತರಿಗೆ ಕರೆ ನೀಡಿದರು.

ಬ್ಯಾಡಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಐತಿಹಾಸಿಕ ಜಯ ದಾಖಲಿಸುವ ಮೂಲಕ ಜನರಿಗೆ ಉತ್ತಮ ಆಡಳಿತ ನೀಡಿದೆ. ಪರಿಷತ್ ಚುನಾವಣೆ ಹಗುರವಾಗಿ ಪರಿಗಣಿಸದೇ ಆಡಳಿತಕ್ಕೆ ಸಿಕ್ಕ ಮರು-ಮೌಲ್ಯಮಾಪನ ಅಥವಾ ಜನಾದೇಶದಂತೆ ಅಭ್ಯರ್ಥಿ ಗೆಲ್ಲಿಸಲು ಶ್ರಮಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಕಾರ್ಯಕರ್ತರಿಗೆ ಕರೆ ನೀಡಿದರು.

ಪಶ್ವಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮುಂಚಿತವಾಗಿ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕತ್ವವು ಚುನಾವಣೆಗೂ ಸುಮಾರು 10 ತಿಂಗಳು ಮುಂಚಿತವಾಗಿಯೇ ಮೋಹನ ಲಿಂಬಿಕಾಯಿ ಅವರ ಹೆಸರು ಪ್ರಕಟಿಸಿದ್ದು, ಅಭ್ಯರ್ಥಿಗೆ ಕ್ಷೇತ್ರಾದಾದ್ಯಂತ ಪ್ರವಾಸ ಮಾಡಲು ಮತ್ತು 4 ಜಿಲ್ಲೆಗಳಲ್ಲಿ ಬೂತ್ ಮಟ್ಟದಲ್ಲಿ ಪ್ರಚಾರಕ್ಕೆ ಸಮಯ ಸಿಕ್ಕಂತಾಯಿತು ಎಂದರು.

ಹೊಸ ಪದವೀಧರರ ನೋಂದಣಿ: ಹೊಸದಾಗಿ ಪದವಿ ಮುಗಿಸಿದವರನ್ನು ಮತದಾರರ ಪಟ್ಟಿಗೆ ಸೇರಿಸುವುದು ಅತ್ಯಂತ ಮುಖ್ಯ, ಕಾಂಗ್ರೆಸ್ ಕಾರ್ಯಕರ್ತರು ಫಾರ್ಮ್-18 ಮೂಲಕ ನಿರುದ್ಯೋಗಿ ಯುವಕರು, ಯುವ ಪದವೀಧರರು, ಖಾಸಗಿ ವಲಯದ ಉದ್ಯೋಗಿಗಳನ್ನು ನೋಂದಣಿ ಮಾಡಿಸುವ ಮೂಲಕ ಕಾಂಗ್ರೆಸ್ ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಬೇಕಿದೆ ಎಂದರು.

ಕ್ಷೇತ್ರಕ್ಕೆ ಹೊಸ ಧ್ವನಿ ಅಗತ್ಯ:ಹಾಲಿ ಎಂಎಲ್‌ಸಿ ಬಿಜೆಪಿಯ ಎಸ್.ವಿ. ಸಂಕನೂರ ಸುದೀರ್ಘ ಕಾಲದಿಂದ ಸದರಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಅವರ ವಿರುದ್ಧ ಇರುವಂತಹ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿಯ ಗೆಲುವಿಗೆ ಬಳಸಿಕೊಳ್ಳಬೇಕಿದೆ. ಕ್ಷೇತ್ರಕ್ಕೆ ಹೊಸಧ್ವನಿಯ ಅಗತ್ಯ ಎಂಬ ಘೋಷಣೆಯೊಂದಿಗೆ ಪ್ರಚಾರ ನಡೆಸಬೇಕಾಗಿದೆ ಎಂದರು.

ವೈಯಕ್ತಿಕ ಭಿನ್ನಾಭಿಪ್ರಾಯ ಬೇಡ: ಅಧ್ಯಕ್ಷತೆ ವಹಿಸಿದ್ದ ದಾನಪ್ಪ ಚೂರಿ ಮಾತನಾಡಿ, ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟಿತರಾಗಿ ಕೆಲಸ ಮಾಡುವ ಮೂಲಕ ಪಕ್ಷದ ಅಭ್ಯರ್ಥಿಯ ಗೆಲುವನ್ನೇ ಗುರಿಯಾಗಿಸಿಕೊಂಡು ಚುನಾವಣಾ ಕಾರ್ಯದಲ್ಲಿ ತೊಡಗುವಂತೆ ಕರೆ ನೀಡಿದರು. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬದಲಾದ ಜೀವನಶೈಲಿ ಅನಾರೋಗ್ಯಕ್ಕೆ ಕಾರಣ: ಡಾ. ಹಿರೇಮಠ
ರಾಷ್ಟ್ರೀಯ ಏಕತೆ ಬೆಸೆಯುವ ಭಾಷೆ ಹಿಂದಿ: ಡಾ. ಹುಸೇನಸಾಬ