ಕನ್ನಡಪ್ರಭ ವಾರ್ತೆ ಮೂಲ್ಕಿರಾಜ್ಯ ಸರ್ಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ. ಓಲೈಕೆಯ ತಂತ್ರವಾಗಿ ಆರ್‌ಎಸ್‌ಎಸ್ ನೇತಾರ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ದಾಖಲಿಸಿ ಸರ್ಕಾರ ಮತ್ತಷ್ಟು ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವಂತೆ ಕಾಣುತ್ತದೆ. ಜೇನು ಗೂಡಿಗೆ ಕಲ್ಲು ಹೊಡೆಯಲು ಹೋದರೆ ಏನಾಗುತ್ತದೆ ಎಂಬುದು ಸರ್ಕಾರಕ್ಕೆ ತಿಳಿದಿರಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಹಿಂದೂ ನಾಯಕರ ಮನೆ ಫೋಟೋ ತೆಗೆಯೋದು, ನಡು ರಾತ್ರಿ ಮನೆಗೆ ತೆರಳಿ ವಿಚಾರಣೆ ನೆಪದಲ್ಲಿ ತೊಂದರೆ ಕೊಡುವುದು ಕಾನೂನು ಮೀರಿದ ನಡವಳಿಕೆಯನ್ನು ಪೊಲೀಸರು ತೋರುತ್ತಿದ್ದಾರೆ. ಗ್ರಾಮಾಂತರ ಪ್ರದೇಶದ ಕಾರ್ಯಕರ್ತರ ಮನೆಗೆ ನುಗ್ಗಿ ವಿಚಾರಣೆ ,ಬೆದರಿಸುವ ವರ್ತನೆ ತುರ್ತು ಪರಿಸ್ಥಿತಿ ನೆನಪಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.